ಕಲಬುರಗಿ: ಸೇಡಂ ತಾಲೂಕಿನ ಕೋಡ್ಲಾ ಸಮೀಪದ ಸಿಮೆಂಟ್ ಕಾರ್ಖಾನೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಬಿಹಾರ ಮೂಲದ ಕಾರ್ಮಿಕನ ಮೃತದೇಹವನ್ನು ಅಮಾನವೀಯ ರೀತಿಯಲ್ಲಿ ಎಳೆಯುವುದಾಗಿ ಕಂಡಿರುವ ವಿಡಿಯೋ ವೈರಲ್ ಆಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಕಾರ್ಖಾನೆಯ ಆರು ಕಾರ್ಮಿಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಘಟನೆ ವಿವರ:
ಚಂದನ್ಸಿಂಗ್ ಎಂಬ ಕಾರ್ಮಿಕ ರಕ್ತದೊತ್ತಡ ಹೆಚ್ಚಾದ ಪರಿಣಾಮ ಅಸ್ವಸ್ಥನಾಗಿ ಕುಸಿದು ಬಿದ್ದಿದ್ದರು. ಆದರೆ ಸಹೋದ್ಯೋಗಿಗಳು ಅಗತ್ಯ ವೈದ್ಯಕೀಯ ಸಹಾಯ ಒದಗಿಸದೆ, ಮೃತದೇಹವನ್ನು ನಿರ್ಲಕ್ಷ್ಯಪೂರ್ಣವಾಗಿ ಎಳೆಯುವ ರೀತಿಯಲ್ಲಿ ಸ್ಥಳಾಂತರಿಸಿದರು. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕೆಲವೇ ಗಂಟೆಗಳಲ್ಲೇ ವೈರಲ್ ಆಗಿತು.
ವೀಡಿಯೋ ಹರಿದಾಡಿದ ಬೆನ್ನಲ್ಲೇ, ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಘಟನೆಯ ಬಗ್ಗೆ ಕಿಡಿಕಾರಿದರು. ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಕ್ಷಣವೇ ಕ್ರಮ ತೆಗೆದುಕೊಳ್ಳಲು ಸೂಚಿಸಿದರು.
ಕಾನೂನು ಕ್ರಮ:
ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಕಾರ್ಖಾನೆಯ ಆರು ಕಾರ್ಮಿಕರಾದ ಅಜಯ್, ಹೈದರ್ ಅಲಿ, ಹರಿಂದರ್, ರಮೇಶ್ಚಂದ್ರ, ರವಿಶಂಕರ್ ಮತ್ತು ಅಖಿಲೇಶ್ ವಿರುದ್ಧ ಸೇಡಂ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ.
ಈ ಘಟನೆಯು ಕಾರ್ಮಿಕರ ಸುರಕ್ಷತೆ ಮತ್ತು ಮಾನವೀಯತೆ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದ್ದು, ಘಟನೆಯನ್ನು ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕೂಡ ಪ್ರತಿಕ್ರಿಯೆ ವ್ಯಕ್ತಪಡಿಸಿವೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…