Latest

ಸಿಮೆಂಟ್ ಕಾರ್ಖಾನೆಯಲ್ಲಿ ಕಾರ್ಮಿಕನ ಅಮಾನವೀಯ ಮರಣ: ಆರು ಕಾರ್ಮಿಕರ ವಿರುದ್ಧ ಎಫ್ಐಆರ್ ದಾಖಲು

ಕಲಬುರಗಿ: ಸೇಡಂ ತಾಲೂಕಿನ ಕೋಡ್ಲಾ ಸಮೀಪದ ಸಿಮೆಂಟ್ ಕಾರ್ಖಾನೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಬಿಹಾರ ಮೂಲದ ಕಾರ್ಮಿಕನ ಮೃತದೇಹವನ್ನು ಅಮಾನವೀಯ ರೀತಿಯಲ್ಲಿ ಎಳೆಯುವುದಾಗಿ ಕಂಡಿರುವ ವಿಡಿಯೋ ವೈರಲ್ ಆಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಕಾರ್ಖಾನೆಯ ಆರು ಕಾರ್ಮಿಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಘಟನೆ ವಿವರ:
ಚಂದನ್ಸಿಂಗ್ ಎಂಬ ಕಾರ್ಮಿಕ ರಕ್ತದೊತ್ತಡ ಹೆಚ್ಚಾದ ಪರಿಣಾಮ ಅಸ್ವಸ್ಥನಾಗಿ ಕುಸಿದು ಬಿದ್ದಿದ್ದರು. ಆದರೆ ಸಹೋದ್ಯೋಗಿಗಳು ಅಗತ್ಯ ವೈದ್ಯಕೀಯ ಸಹಾಯ ಒದಗಿಸದೆ, ಮೃತದೇಹವನ್ನು ನಿರ್ಲಕ್ಷ್ಯಪೂರ್ಣವಾಗಿ ಎಳೆಯುವ ರೀತಿಯಲ್ಲಿ ಸ್ಥಳಾಂತರಿಸಿದರು. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕೆಲವೇ ಗಂಟೆಗಳಲ್ಲೇ ವೈರಲ್ ಆಗಿತು.

ವೀಡಿಯೋ  ಹರಿದಾಡಿದ ಬೆನ್ನಲ್ಲೇ, ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಘಟನೆಯ ಬಗ್ಗೆ ಕಿಡಿಕಾರಿದರು. ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಕ್ಷಣವೇ ಕ್ರಮ ತೆಗೆದುಕೊಳ್ಳಲು ಸೂಚಿಸಿದರು.

ಕಾನೂನು ಕ್ರಮ:
ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಕಾರ್ಖಾನೆಯ ಆರು ಕಾರ್ಮಿಕರಾದ ಅಜಯ್, ಹೈದರ್ ಅಲಿ, ಹರಿಂದರ್, ರಮೇಶ್ಚಂದ್ರ, ರವಿಶಂಕರ್ ಮತ್ತು ಅಖಿಲೇಶ್ ವಿರುದ್ಧ ಸೇಡಂ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ.

ಈ ಘಟನೆಯು ಕಾರ್ಮಿಕರ ಸುರಕ್ಷತೆ ಮತ್ತು ಮಾನವೀಯತೆ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದ್ದು, ಘಟನೆಯನ್ನು ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕೂಡ ಪ್ರತಿಕ್ರಿಯೆ ವ್ಯಕ್ತಪಡಿಸಿವೆ.

nazeer ahamad

Recent Posts

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

1 hour ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago