Latest

ವಿಜಯಪುರದಲ್ಲಿ ಅಮಾನವೀಯ ಘಟನೆ: 20,000 ರೂ. ಸಾಲ ವಾಪಸ್ ನೀಡದ ವ್ಯಕ್ತಿಯನ್ನು ಸರಪಳಿಯಿಂದ ಕಟ್ಟಿ ಹಾಕಿದ ಘಟನೆ

ವಿಜಯಪುರ: ಜಿಲ್ಲೆಯ ಚಡಚಣ ತಾಲ್ಲೂಕಿನ ಹತ್ತಳ್ಳಿ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆಯಿದ್ದು, ಸಾಲದ ಹಣ ವಾಪಸ್ ನೀಡದ ಕಾರಣ ವ್ಯಕ್ತಿಯೊಬ್ಬನನ್ನು ಸರಪಳಿಯಿಂದ ಕಟ್ಟಿ ಹಾಕಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಚಾಂದ್ ಸಾಬ್ ಎಂಬವರು 20,000 ರೂಪಾಯಿ ಸಾಲ ಪಡೆದಿದ್ದರಿದ್ದು, ಸಾಲದ ಹಣ ವಾಪಸ್ ಕೊಡದ ಕಾರಣದಿಂದಾಗಿ ಕುಮಾರ್ ಬಿರಾದರ್ ಎಂಬವರು ಆಕ್ರೋಶಕ್ಕೆ ಮಿದ್ದು, ಅವರ ಕಾಲಿಗೆ ಲೋಹದ ಸರಪಳಿ ಕಟ್ಟಿದರೆಂಬ ಆರೋಪ ಇದೆ. ಈ ಘಟನೆ ಗ್ರಾಮಸ್ಥರಲ್ಲಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಮಾನವ ಹಕ್ಕುಗಳನ್ನು ಹಾಸ್ಯಾಸ್ಪದಗೊಳಿಸುವ ಕೃತ್ಯವೆಂದು ಸಾರ್ವಜನಿಕರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ಚಡಚಣ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಚಾಂದ್ ಸಾಬ್ ವಿರುದ್ಧ ಹಣ ವಾಪಸ್ ನೀಡದ ಆರೋಪವಿದ್ದರೂ, ಯಾರನ್ನಾದರೂ ಸರಪಳಿಯಿಂದ ಕಟ್ಟುವುದು ಕಾನೂನಿಗೆ ವಿರುದ್ಧವಾಗಿರುವುದರಿಂದ, ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮಕ್ಕಾಗಿ ತನಿಖೆ ಸಾಗುತ್ತಿದೆ.

nazeer ahamad

Recent Posts

ಸಾಲ ಮರುಪಾವತಿ ಪ್ರಕರಣ: ಶಿರಸಿಯ ರವೀಶ ಹೆಗಡೆ ಭಟ್ಕಳ ಪೊಲೀಸರ ವಶಕ್ಕೆ

ಭಟ್ಕಳ: ಸಾಲ ಪಡೆದ ಹಣವನ್ನು ಮರುಪಾವತಿಸದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಶಿರಸಿ ಮೂಲದ ರವೀಶ ವೆಂಕಟ್ರಮಣ ಹೆಗಡೆ ಅವರನ್ನು ಭಟ್ಕಳ…

3 hours ago

52ರಲ್ಲೂ ಮಲೈಕಾ ಅರೋರಾ ಲವ್ ಲೈಫ್‌ ಸದ್ದು: ನಬೀಲ್ ನದ್ಲವಿ ಜೊತೆ ಫೋಟೋ ವೈರಲ್, ಹೊಸ ಸಂಬಂಧದ ಗುಸುಗುಸು!

ಮುಂಬೈ: ಬಾಲಿವುಡ್‌ನ ಫಿಟ್ನೆಸ್ ಹಾಗೂ ಫ್ಯಾಷನ್ ಐಕಾನ್ ಮಲೈಕಾ ಅರೋರಾ ತಮ್ಮ ವೈಯಕ್ತಿಕ ಜೀವನದ ವಿಚಾರವಾಗಿಯೂ ಆಗಾಗ್ಗೆ ಸುದ್ದಿಯಾಗುತ್ತಾರೆ. ಇದೀಗ…

4 hours ago

ಬೈಕ್‌ಗೆ ಬೆಂಕಿ ಹಾಕಿದ್ದು ರಾಜಕೀಯ ದ್ವೇಷಕ್ಕಲ್ಲ; ಪತಿಯನ್ನೇ ಕೊಲ್ಲಲು ಪತ್ನಿಯ ಸಂಚು! 6 ಮಂದಿ ಬಂಧನ

ಚಂದ್ರಗಿರಿ (ತಿರುಪತಿ): ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ ಎಂದು ಭಾವಿಸಲಾಗಿದ್ದ ಪ್ರಕರಣವೊಂದು ತನಿಖೆಯ ಬಳಿಕ ಬೇರೆಯದೇ ತಿರುವು…

4 hours ago

ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಪಾಲಿಗೆ ಯಮನಾದ: 6 ದಿನದ ಹಸುಗೂಸಿನೊಂದಿಗೆ ಪರಾರಿ!

ದಾವಣಗೆರೆ: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಸಾವಿಗೆ ಕಾರಣನಾದ ಆರೋಪ ಕೇಳಿಬಂದಿದ್ದು, ಮೃತದೇಹವನ್ನು ಪೊಲೀಸ್ ಠಾಣೆ ಬಳಿಯ ರಸ್ತೆಯಲ್ಲಿ ಬಿಟ್ಟು…

4 hours ago

ಹಾಡಹಗಲೇ ಪಡಿತರ ಅಕ್ಕಿ ಸಾಗಾಟ: ಆಹಾರ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..!

ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…

1 day ago

₹5 ಸಾವಿರಕ್ಕೆ ರೂಮ್‌ಗೆ ಬಂದ ಯುವತಿ; ಬಿಯರ್‌ನಲ್ಲಿ ಅಮಲು ಬೆರೆಸಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್!

ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…

1 day ago