Categories: CrimeLatest

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14 ವರ್ಷದ ಬಾಲಕನನ್ನು ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡ ಮಹಿಳೆಯೊಬ್ಬಳು ಬಲೆ ಬೀಸಿ, ಬಳಿಕ ಅಪಹರಣಕ್ಕೆ ಕಾರಣವಾದ ಘಟನೆ ಇದೀಗ ಬಹಿರಂಗವಾಗಿದೆ.

ಆರೋಪಿಗಳು ಬಾಲಕನನ್ನು ಅಪಹರಿಸಿ, ಅವನ ಕುಟುಂಬದಿಂದ 1 ಕೋಟಿ ರೂಪಾಯಿ ಸುಲಿಗೆ ಮಾಡಲು ಯತ್ನಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಕೃತ್ಯದ ಹಿಂದೆ ಬಾಲಕನಿಗೆ ಪರಿಚಿತನಾಗಿದ್ದ ಅವನ ಸ್ವಂತ ಸೋದರಳಿಯ ಸಂಜಯ್ ಸಾಹು ಇದ್ದಾನೆ ಎಂಬುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.

ಘಟನೆ ಹೀಗಿದೆ: ಇನ್‌ಸ್ಟಾಗ್ರಾಮ್ ಮೂಲಕ ಸಂಪರ್ಕ ಬೆಳೆಸಿಕೊಂಡ ಮಹಿಳೆ, ಬಾಲಕನ ವಿಶ್ವಾಸ ಗಳಿಸಿ ಅವನನ್ನು ದುರ್ಗ್ ಜಿಲ್ಲೆಯ ತಿರಂಗಾ ಚೌಕ್ ಪ್ರದೇಶಕ್ಕೆ ಕರೆಯಿಸಿಕೊಂಡಿದ್ದಾಳೆ. ಆಕೆಯ ಮಾತಿಗೆ ನಂಬಿಕೆ ಇಟ್ಟು ಅಲ್ಲಿಗೆ ತೆರಳಿದ ಬಾಲಕನನ್ನು ಈಗಾಗಲೇ ತಯಾರಾಗಿ ಕಾದಿದ್ದ ತಂಡ ಅಪಹರಿಸಿದೆ. ಈ ಅಪಹರಣ ಸಂಪೂರ್ಣವಾಗಿ ಹನಿಟ್ರ್ಯಾಪ್ ತಂತ್ರದ ಮೂಲಕ ನಡೆದದ್ದು ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 12ರಂದು ಬಾಲಕ ಮನೆಗೆ ಮರಳದೇ ಇದ್ದಾಗ ಆತಂಕಗೊಂಡ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಅಪಹರಣಕಾರರು ಕರೆ ಮಾಡಿ, ಬಾಲಕನ ಬಿಡುಗಡೆಗಾಗಿ 1 ಕೋಟಿ ರೂಪಾಯಿ ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದಾರೆ. ವಿಡಿಯೋಗಳ ಮೂಲಕವೂ ಒತ್ತಡ ಹಾಕಲು ಪ್ರಯತ್ನಿಸಿದ್ದರು.

ದೂರು ದಾಖಲಿಸಿಕೊಂಡ ಬಳಿಕ ಆಮ್ಲೇಶ್ವರ ಪೊಲೀಸ್ ಠಾಣೆ, ಸೈಬರ್ ಸೆಲ್ ಮತ್ತು ACCU ತಂಡಗಳು ಸಂಯುಕ್ತ ಕಾರ್ಯಾಚರಣೆ ಕೈಗೊಂಡವು. ಮೊಬೈಲ್ ಲೊಕೇಶನ್, ಕಾಲ್ ಡೀಟೇಲ್ ರೆಕಾರ್ಡ್ (CDR) ಹಾಗೂ ಮಾಹಿತಿದಾರರ ಸಹಾಯದಿಂದ ಆರೋಪಿಗಳ ಸುಳಿವು ಪತ್ತೆಯಾಯಿತು. ಅವರು ಧಮತರಿ ಪ್ರದೇಶದಲ್ಲಿ ಅಡಗಿಕೊಂಡಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಎಲ್ಲ ಆರೋಪಿಗಳನ್ನು ಬಂಧಿಸಿ ಬಾಲಕನನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ಈ ಪ್ರಕರಣದಲ್ಲಿ ಸಂಜಯ್ ಸಾಹು, ಹೇಮ್ ಪುಷ್ಪಾ ಸಾಹು, ಶೈಲೇಂದ್ರ ಲಹಾರೆ, ಕೃಷ್ಣ ಸಾಹು ಅಲಿಯಾಸ್ ಕರಣ್ ಹಾಗೂ ರವೀಂದ್ರ ಲಹಾರೆ ಸೇರಿ ಐವರನ್ನು ಬಂಧಿಸಲಾಗಿದೆ. ಇವರಿಂದ ಒಂದು ಕಾರು ಮತ್ತು 6 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಘಟನೆ ಸೋಶಿಯಲ್ ಮೀಡಿಯಾ ಬಳಕೆಯಲ್ಲಿ ಎಚ್ಚರಿಕೆಯ ಅಗತ್ಯವನ್ನೂ ಮತ್ತೆ ಒತ್ತಿ ಹೇಳುತ್ತದೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

11 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

15 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago