ಪುತ್ತೂರು: ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಗ್ರಾಮಗಳಲ್ಲಿ ನಡೆದ ಸರಣಿ ಮನೆಗಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಈ ಸಂಬಂಧ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಕುಖ್ಯಾತ ಅಂತಾರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೇರಳದ ಕಣ್ಣೂರು ಜಿಲ್ಲೆ ತಲಿಪೆಂಬ ತಾಲೂಕು ಅಲಕೋಡು ವರಂಬಿಲ್ ಮೂಲದ ಮಹಮ್ಮದ್ ಕೆ.ಯು.(42) ಬಂಧಿತ ಆರೋಪಿ.
ಆರೋಪಿಯ ವಿರುದ್ಧ ಕೇರಳ ರಾಜ್ಯದಲ್ಲಿ 120ಕ್ಕೂ ಹೆಚ್ಚು ಕೇಸ್ ದಾಖಲಾಗಿದ್ದು.
ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆ, ವಿಟ್ಲ,
ಬಂಟ್ವಾಳ, ಪುಂಜಾಲಕಟ್ಟೆ,ಸವಣೂರು ಬೆಳಂದೂರು ಪಳ್ಳತ್ತಾರು ಸೇರಿದಂತೆ ಹಲವೆಡೆ ಮನೆಗಳ್ಳತನ ಮಾಡಿರುವುದಾಗಿ ಆರೋಪಿಯು ಪೊಲೀಸರ ವಿಚಾರಣೆ ಸಂದರ್ಭದಲ್ಲಿ ಒಪ್ಪಿಕೊಂಡಿದ್ದಾನೆ.
ಬಂಧಿತ ಆರೋಪಿಯಿಂದ ಸುಮಾರು ಎರಡೂವರೆ ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಮೋಟಾರು ಸೈಕಲ್‌ನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಎಂದು ದಕ್ಷಿಣ ಕನ್ನಡ ಜಿಲ್ಲೆ ಎಸ್ಪಿ ತಿಳಿಸಿದ್ದಾರೆ
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…