ಮಹಾರಾಷ್ಟ್ರದ ಕಲ್ಯಾಣ್ ವೆಸ್ಟ್‌ನ ಗೌರಿಪಾಡಾ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ಮದ್ಯದ ಅಮಲಿನಲ್ಲಿದ್ದ ಯುವಕನೊಬ್ಬ ಮರದ ಕೋಲಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಸಾರ್ವಜನಿಕರ ನಡುವಿನ ಗಲಾಟೆ ಕುರಿತು ಮಾಹಿತಿ ಪಡೆದ ಕಾನ್ಸ್‌ಟೇಬಲ್ ಗಣೇಶ್ ಚವಾಣ್ ಸ್ಥಳಕ್ಕೆ ತೆರಳಿ ಪರಿಸ್ಥಿತಿ ನಿಯಂತ್ರಿಸಲು ಮುಂದಾಗಿದ್ದರು. ಈ ವೇಳೆ ಮದ್ಯದ ಅಮಲಿನಲ್ಲಿದ್ದ ರಾಹುಲ್ ತಾಯಡೆ ಎಂಬಾತ ಏಕಾಏಕಿ ಮರದ ಕೋಲಿನಿಂದ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಪೂರ್ಣ ಘಟನೆ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿವೆ. ಗಾಯಗೊಂಡ ಕಾನ್ಸ್‌ಟೇಬಲ್‌ರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಖಡಕ್‌ಪಾಡಾ ಪೊಲೀಸರು ಆರೋಪಿ ರಾಹುಲ್ ತಾಯಡೆಯನ್ನು ಬಂಧಿಸಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…