ಕೊಲಾರ ಜಿಲ್ಲೆ ಮುಳಬಾಗಿಲು ಪಟ್ಟಣದಲ್ಲಿ ಆನ್‌ಲೈನ್ ಆ್ಯಪ್‌ಗಳ ಸಹಾಯದಿಂದ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿಯನ್ನು ಸೆರೆಹಿಡಿದಿದ್ದಾರೆ. ಸಿಇಎನ್ ಪೊಲೀಸರ ತಂಡ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ನಯಾಜ್ ಎಂಬಾತನನ್ನು ಬಂಧಿಸಿದ್ದಾರೆ.
ಬಂಧಿತನಿಂದ ಎರಡು ಮೊಬೈಲ್ ಫೋನ್‌ಗಳು ಮತ್ತು ಖಾತೆಯಲ್ಲಿ ಇರುವ ₹5.19 ಲಕ್ಷ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಾರ್ವಜನಿಕರಿಂದ ನಗದು ಹಾಗೂ ಯುಪಿಐ ಮೂಲಕ ಹಣ ಸ್ವೀಕರಿಸಿ, ಆನ್‌ಲೈನ್‌ನಲ್ಲಿ ಬೆಟ್ಟಿಂಗ್ ಚಟುವಟಿಕೆ ನಡೆಸುತ್ತಿದ್ದಾನೆ ಎನ್ನಲಾಗಿದೆ.
ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರಬಹುದೆಂಬ ಶಂಕೆಯಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
ಈ ದಾಳಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಹೆಚ್ಚುವರಿ ಎಸ್‌ಪಿ ಸಿ.ಆರ್. ರವಿಶಂಕರ್, ಎಚ್.ಸಿ. ಜಗದೀಶ್, ಸಿಇಎನ್ ವಿಭಾಗದ ಅಧಿಕಾರಿಗಳಾದ ರಾಜೇಶ್, ಎಸ್.ಆರ್. ಜಗದೀಶ್, ವಿನಯ್, ಶಿವಾನಂದ, ಅರುಣ್ ಕುಮಾರ್ ಮೊದಲಾದವರು ಪಾಲ್ಗೊಂಡಿದ್ದರು.
ಪೋಲೀಸರು ಇದೀಗ ಬೆಟ್ಟಿಂಗ್ ಜಾಲದ ಹಿಂದೆ ಇರುವ ಪ್ರಮುಖ ಆರೋಪಿಗಳನ್ನು ಪತ್ತೆ ಹಚ್ಚಲು ಬಲೆ ಬೀಸಿದ್ದಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…