Latest

ಐಪಿಎಲ್ ಟಿಕೆಟ್ ಕಳ್ಳ ವಹಿವಾಟು – ಇಬ್ಬರು ಪೊಲೀಸ್ ಕಾನ್ಸ್ಟೇಬಲ್‌ಗಳು ಅಮಾನತು

ಬೆಂಗಳೂರು ನಗರದಲ್ಲಿ ಐಪಿಎಲ್ ಪಂದ್ಯಕ್ಕೆ ಸಂಬಂಧಿಸಿದ ಟಿಕೆಟ್‌ಗಳ ಅಕ್ರಮ ಮಾರಾಟ ಪ್ರಕರಣಕ್ಕೆ ತೊಡಗಿರುವ ಆರೋಪದ ಮೇಲೆ ಇಬ್ಬರು ಪೊಲೀಸ್ ಕಾನ್ಸ್ಟೇಬಲ್‌ಗಳನ್ನು ಅಮಾನತು ಮಾಡಲಾಗಿದೆ. ಈ ಕುರಿತು ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಅನುಚೇತ್ ಅವರು ಆದೇಶ ಹೊರಡಿಸಿದ್ದಾರೆ.

ಹಲಸೂರು ಸಂಚಾರಿ ಠಾಣೆಗೆ ಸೇರಿದ್ದ ಕಾನ್ಸ್ಟೇಬಲ್ ರವಿಚಂದ್ರ ಹಾಗೂ ಟಿಎಂಸಿ ಸಿಬ್ಬಂದಿಯಾಗಿದ್ದ ವೆಂಕಟಗಿರಿಗೌಡ ಎಂಬವರನ್ನು ಅಮಾನತು ಮಾಡಲಾಗಿದೆ. ಇವರ ವಿರುದ್ಧ ಟಿಕೆಟ್‌ಗಳನ್ನು ಬ್ಲ್ಯಾಕ್‌ನಲ್ಲಿ ಮಾರಾಟ ಮಾಡುತ್ತಿದ್ದರೆಂಬ ಗಂಭೀರ ಆರೋಪಗಳು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದೆ.

ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಸುಮಾರು ₹20,000 ನಗದು ಹಾಗೂ 61 ಐಪಿಎಲ್ ಟಿಕೆಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೇ 17ರಂದು ನಡೆದ ಆರ್ಸಿಬಿ ಮತ್ತು ಕೆಕೆಆರ್ ನಡುವೆ ನಡೆದ ಹೈವೋಲ್ಟೇಜ್ ಪಂದ್ಯಕ್ಕೆ ಸಂಬಂಧಿಸಿದ ಟಿಕೆಟ್‌ಗಳೇ ಇವು. ವಿಜಯನಗರದ ಪಾರ್ಕ್ ಬಳಿ ಈ ಟಿಕೆಟ್‌ಗಳ ಮಾರಾಟ ನಡೆಯುತ್ತಿದ್ದಾಗ ಆರೋಪಿಗಳು ರೆಡ್ ಹ್ಯಾಂಡ್ ಆಗಿ ಬಂಧನಕ್ಕೆ ಒಳಗಾದರು.

ಈ ಪ್ರಕರಣದಲ್ಲಿ ಶಂಕರ್ ಮತ್ತು ಸುರೇಶ್ ಎಂಬುವವರನ್ನು ಪೊಲೀಸರು ಬಂಧಿಸಿದ್ದು, ಆದರೆ ಕಾನ್ಸ್ಟೇಬಲ್ ರವಿಚಂದ್ರ ಮತ್ತು ವೆಂಕಟಗಿರಿಗೌಡಗೆ ಮಾತ್ರ ನೋಟಿಸ್ ನೀಡಿ ಬಿಡಲಾಗಿತ್ತು. ಇದೀಗ, ಇಬ್ಬರು ಪೊಲೀಸರನ್ನು ಅಮಾನತು ಮಾಡಿ ಅವರ ಮೇಲೆ ಇಲಾಖಾ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ. ಆರೋಪಿಗಳು ಈಗಾಗಲೇ ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಈ ಘಟನೆಯು ಪೊಲೀಸರಿಗೆಲ್ಲಾ ಲಾಂಛನ ಉಂಟುಮಾಡಿರುವುದು ಮಾತ್ರವಲ್ಲದೆ, ಸಾರ್ವಜನಿಕರಲ್ಲಿ ನಿರೀಕ್ಷಿತ ನೈತಿಕತೆ ಹಾಗೂ ಜವಾಬ್ದಾರಿಯತ್ತ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

2 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

2 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

2 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

3 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

3 hours ago