ಬೆಂಗಳೂರು ನಗರದಲ್ಲಿ ಐಪಿಎಲ್ ಪಂದ್ಯಕ್ಕೆ ಸಂಬಂಧಿಸಿದ ಟಿಕೆಟ್‌ಗಳ ಅಕ್ರಮ ಮಾರಾಟ ಪ್ರಕರಣಕ್ಕೆ ತೊಡಗಿರುವ ಆರೋಪದ ಮೇಲೆ ಇಬ್ಬರು ಪೊಲೀಸ್ ಕಾನ್ಸ್ಟೇಬಲ್‌ಗಳನ್ನು ಅಮಾನತು ಮಾಡಲಾಗಿದೆ. ಈ ಕುರಿತು ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಅನುಚೇತ್ ಅವರು ಆದೇಶ ಹೊರಡಿಸಿದ್ದಾರೆ.
ಹಲಸೂರು ಸಂಚಾರಿ ಠಾಣೆಗೆ ಸೇರಿದ್ದ ಕಾನ್ಸ್ಟೇಬಲ್ ರವಿಚಂದ್ರ ಹಾಗೂ ಟಿಎಂಸಿ ಸಿಬ್ಬಂದಿಯಾಗಿದ್ದ ವೆಂಕಟಗಿರಿಗೌಡ ಎಂಬವರನ್ನು ಅಮಾನತು ಮಾಡಲಾಗಿದೆ. ಇವರ ವಿರುದ್ಧ ಟಿಕೆಟ್‌ಗಳನ್ನು ಬ್ಲ್ಯಾಕ್‌ನಲ್ಲಿ ಮಾರಾಟ ಮಾಡುತ್ತಿದ್ದರೆಂಬ ಗಂಭೀರ ಆರೋಪಗಳು ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದೆ.
ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಸುಮಾರು ₹20,000 ನಗದು ಹಾಗೂ 61 ಐಪಿಎಲ್ ಟಿಕೆಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೇ 17ರಂದು ನಡೆದ ಆರ್ಸಿಬಿ ಮತ್ತು ಕೆಕೆಆರ್ ನಡುವೆ ನಡೆದ ಹೈವೋಲ್ಟೇಜ್ ಪಂದ್ಯಕ್ಕೆ ಸಂಬಂಧಿಸಿದ ಟಿಕೆಟ್‌ಗಳೇ ಇವು. ವಿಜಯನಗರದ ಪಾರ್ಕ್ ಬಳಿ ಈ ಟಿಕೆಟ್‌ಗಳ ಮಾರಾಟ ನಡೆಯುತ್ತಿದ್ದಾಗ ಆರೋಪಿಗಳು ರೆಡ್ ಹ್ಯಾಂಡ್ ಆಗಿ ಬಂಧನಕ್ಕೆ ಒಳಗಾದರು.
ಈ ಪ್ರಕರಣದಲ್ಲಿ ಶಂಕರ್ ಮತ್ತು ಸುರೇಶ್ ಎಂಬುವವರನ್ನು ಪೊಲೀಸರು ಬಂಧಿಸಿದ್ದು, ಆದರೆ ಕಾನ್ಸ್ಟೇಬಲ್ ರವಿಚಂದ್ರ ಮತ್ತು ವೆಂಕಟಗಿರಿಗೌಡಗೆ ಮಾತ್ರ ನೋಟಿಸ್ ನೀಡಿ ಬಿಡಲಾಗಿತ್ತು. ಇದೀಗ, ಇಬ್ಬರು ಪೊಲೀಸರನ್ನು ಅಮಾನತು ಮಾಡಿ ಅವರ ಮೇಲೆ ಇಲಾಖಾ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ. ಆರೋಪಿಗಳು ಈಗಾಗಲೇ ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಈ ಘಟನೆಯು ಪೊಲೀಸರಿಗೆಲ್ಲಾ ಲಾಂಛನ ಉಂಟುಮಾಡಿರುವುದು ಮಾತ್ರವಲ್ಲದೆ, ಸಾರ್ವಜನಿಕರಲ್ಲಿ ನಿರೀಕ್ಷಿತ ನೈತಿಕತೆ ಹಾಗೂ ಜವಾಬ್ದಾರಿಯತ್ತ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…