Latest

ಡ್ರೀಮ್ ಡೀಲ್ ಸಂಸ್ಥೆಯ ವಿರುದ್ಧ ಧ್ವನಿ ಎತ್ತಿದ ಇರ್ಫಾನ್‌ಗೆ ಜೀವ ಬೆದರಿಕೆ

ಮುಲ್ಕಿ: ಡ್ರೀಮ್ ಡೀಲ್ ಸಂಸ್ಥೆಯಲ್ಲಿನ ಅವ್ಯವಹಾರಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ್ದಕ್ಕೆ ತನ್ನನ್ನು ಜೀವ ಬೆದರಿಕೆಗೆ ಒಳಪಡಿಸಲಾಗಿದೆ ಎಂದು ಮುಲ್ಕಿಯ ಗೇರುಕಟ್ಟೆ ಮುನ್ನ ಮಂಝಿಲ್ ನಿವಾಸಿ ಮಹಮ್ಮದ್ ಇರ್ಫಾನ್ ಗಂಭೀರ ಆರೋಪ ಮಾಡಿದ್ದಾರೆ. ಶನಿವಾರ ಮುಲ್ಕಿ ಪುನರೂರು ಟೂಡ್ರೀಮ್ ಡೀಲ್ ಸಂಸ್ಥೆಯಲ್ಲಿನ ಅವ್ಯವಹಾರಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ್ದಕ್ಕೆ ತನ್ನನ್ನು ಜೀವ ಬೆದರಿಕೆಗೆ ಒಳಪಡಿಸಲಾಗಿದೆ ಎಂದು ಮುಲ್ಕಿಯ ಗೇರುಕಟ್ಟೆರಿಸ್ಟ್ ಹೋಮ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಲಿಖಿತ ಹೇಳಿಕೆಯೊಂದಿಗೆ ಈ ಆರೋಪ ಹೊರಿಸಿದರು.

ಮೋಸದ ವಿರುದ್ಧ ಧ್ವನಿ ಎತ್ತಿದರೆ ಬೆದರಿಕೆ

ಇರ್ಫಾನ್ ಹೇಳಿದ ಪ್ರಕಾರ, ಅವರು ಡ್ರೀಮ್ ಡೀಲ್ ಸೀಸನ್-2ರಲ್ಲಿ ಮೂರು ಕಾರ್ಡ್ ಹೊಂದಿದ್ದರು ಮತ್ತು ನೂರಾರು ಜನರನ್ನು ಸದಸ್ಯರನ್ನಾಗಿ ಸೇರಿಸಿದ್ದರು. ಆದರೆ, ಈ ಸಂಸ್ಥೆಯಲ್ಲಿ ಅಕ್ರಮ ನಡೆದು ಜನರಿಗೆ ಅನ್ಯಾಯವಾಗುತ್ತಿದೆ ಎಂಬುದು ಸ್ಪಷ್ಟವಾದಾಗ, ಅವರು ನ್ಯಾಯಕ್ಕಾಗಿ ಧ್ವನಿ ಎತ್ತಿದರು. ಇದರಿಂದ ಅಸಮಾಧಾನಗೊಂಡ ಸಂಸ್ಥೆಯವರೇ ಅವರ ವಿರುದ್ಧ ತೀಕ್ಷ್ಣ ನಡೆ ತೆಗೆದುಕೊಂಡಿದ್ದಾರೆ.

“ನಾನು ಅಕ್ರಮ ವಿರುದ್ಧ ಆವಾಜ್ ಎತ್ತಿದ ಬಳಿಕ, ಡ್ರೀಮ್ ಡೀಲ್ ಕಾರ್ಯಕರ್ತ ಅಶ್ರಫ್ ನನ್ನನ್ನು ಸಂಪರ್ಕಿಸಿ, ಸೂಕ್ತ ನ್ಯಾಯ ಒದಗಿಸಲಾಗುತ್ತದೆ ಎಂದು ಭರವಸೆ ನೀಡಿದ್ದರು. ಆದರೆ, ನಂತರ ಗುಲಾಂ ಮುಹಮ್ಮದ್ ಹೆಜಮಾಡಿ ಎಂಬುವವರ ಮೂಲಕ ನನಗೆ ಜೀವ ಬೆದರಿಕೆ ಹಾಕಲಾಯಿತು. ‘ಪಣಂಬೂರು ಎಸಿಪಿ ನನ್ನ ಆತ್ಮೀಯರು. ಅವರ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ನಿನ್ನನ್ನು ಮುಗಿಸಿ ಬಿಡುತ್ತೇನೆ’ ಎಂದು ಗುಲಾಂ ಮುಹಮ್ಮದ್ ಬೆದರಿಸಿದ್ದಾರೆ,” ಎಂದು ಇರ್ಫಾನ್ ಆರೋಪಿಸಿದರು.

ಈ ಬಗ್ಗೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಈಗಾಗಲೇ ಜಿಲ್ಲಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ಗುಲಾಂ ಮುಹಮ್ಮದ್‌ಗೆ ಕೊಲೆ ಬೆದರಿಕೆ ಪ್ರಕರಣ

ಇನ್ನು, ಇರ್ಫಾನ್ ವಿರುದ್ಧ ಗುತ್ತಿಗೆ ಸಂಸ್ಥೆಯ ಮುಖ್ಯಸ್ಥ ಹಾಗೂ ಸಮಾಜ ಸೇವಕ ಗುಲಾಂ ಮುಹಮ್ಮದ್ ಹೆಜಮಾಡಿ ಅವರು ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಗುಲಾಂ ಮುಹಮ್ಮದ್ ಅವರ ದೂರಿನ ಪ್ರಕಾರ, ಮುಹಮ್ಮದ್ ಇರ್ಫಾನ್ ಅವರ ಬಗ್ಗೆ ಮಾನಹಾನಿಕರ ಲೇಖನಗಳನ್ನು ಜಾಲತಾಣಗಳಲ್ಲಿ ಹರಡಿದ್ದರೆಂದು ವಿಚಾರಣೆಗೆ ಒಳಪಡಿಸಲಾಯಿತು. ಆದರೆ, ಈ ವಿಚಾರಣೆಯಲ್ಲಿ ಇರ್ಫಾನ್ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು ಮಾತ್ರವಲ್ಲದೆ, ಕೊಲೆ ಬೆದರಿಕೆ ಕೂಡ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಕರಣಗಳು ಪರಸ್ಪರ ಗಂಭೀರ ಆರೋಪಗಳನ್ನು ಒಳಗೊಂಡಿರುವುದರಿಂದ, ಪೊಲೀಸರು ಸತ್ಯಾಸತ್ಯತೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.

nazeer ahamad

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 hour ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

6 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

21 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago