Categories: CrimeLatest

“ಜಾಗಿಂಗ್ ಡ್ರೆಸ್ ಕೂಡ ಪ್ರಚೋದನೆನಾ?”: ಹೈದರಾಬಾದ್‌ನಲ್ಲಿ ಯುವತಿಗೆ ಸಾರ್ವಜನಿಕ ಲೈಂಗಿಕ ಕಿರುಕುಳ, ಭದ್ರತೆ ಬಗ್ಗೆ ಆಕ್ರೋಶ

ಹೈದರಾಬಾದ್: ನಗರದಲ್ಲಿ ಮಹಿಳೆಯರ ಭದ್ರತೆ ಪ್ರಶ್ನೆಯಾಗಿ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಜನನಿಬಿಡ ಪ್ರದೇಶದಲ್ಲೇ ಜಾಗಿಂಗ್ ಮಾಡುತ್ತಿದ್ದ ಯುವತಿಗೆ ವ್ಯಕ್ತಿಯೊಬ್ಬ ಸಾರ್ವಜನಿಕವಾಗಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಆತಂಕ ಮೂಡಿಸಿದೆ.

ಘಟನೆ ಸೈಬರಾಬಾದ್ ವ್ಯಾಪ್ತಿಯ ಔಟರ್ ರಿಂಗ್ ರೋಡ್ (ORR) ಪಕ್ಕದಲ್ಲಿರುವ ಜನಪ್ರಿಯ ಸೈಕ್ಲಿಂಗ್ ಟ್ರ್ಯಾಕ್‌ನಲ್ಲಿ ನಡೆದಿದೆ. ಬೆಳಿಗ್ಗೆ ಸುಮಾರು 6:15ರ ವೇಳೆಗೆ ಯುವತಿ ಜಾಗಿಂಗ್ ಮಾಡುತ್ತಿದ್ದಾಗ, ಎದುರಾದ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿ ಹಸ್ತಮೈಥುನ ಮಾಡಲು ಮುಂದಾಗಿದ್ದಾನೆ. ಸುತ್ತಮುತ್ತ ಸೈಕ್ಲಿಸ್ಟ್‌ಗಳು ಮತ್ತು ಓಟಗಾರರು ಇದ್ದರೂ ಯಾವುದೇ ಭಯವಿಲ್ಲದೆ ಆತ ಈ ಕೃತ್ಯ ಎಸಗಿರುವುದು ಸಮಾಜದ ಸುರಕ್ಷತಾ ಸ್ಥಿತಿಗತಿಗಳ ಬಗ್ಗೆ ಪ್ರಶ್ನೆ ಎಬ್ಬಿಸಿದೆ.

ಘಟನೆಯ ನಂತರ ಸಂತ್ರಸ್ತ ಯುವತಿ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಆಕ್ರೋಶ ಹೊರಹಾಕಿದ್ದು, ಸಮಾಜದ ಮನೋಭಾವವನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. “ನಾವು ಧರಿಸುವ ಜಾಗಿಂಗ್ ಡ್ರೆಸ್ ಕೂಡ ಪ್ರಚೋದನೆ ಎನ್ನುವುದಾದರೆ, ಇನ್ನೇನು ಧರಿಸಬೇಕು? ಜನಸಂದಣಿ ಇರುವ ಸ್ಥಳದಲ್ಲೇ ಇಂತಹ ಘಟನೆಗಳು ನಡೆಯುತ್ತಿದ್ದರೆ ಮಹಿಳೆಯರಿಗೆ ಸುರಕ್ಷತೆ ಎಲ್ಲಿದೆ?” ಎಂದು ಅವರು ಕಿಡಿಕಾರಿದ್ದಾರೆ.

ಯುವತಿ ತಕ್ಷಣವೇ ತನ್ನ ಮೊಬೈಲ್‌ನಲ್ಲಿ ಘಟನೆ ದಾಖಲಿಸಲು ಯತ್ನಿಸಿದರೂ, ಕ್ಯಾಮೆರಾ ತೆರೆಯುವಷ್ಟರಲ್ಲಿ ಆರೋಪಿಯ ಮುಖ ಸ್ಪಷ್ಟವಾಗಿ ಸೆರೆಯಾಗಿಲ್ಲ. ಆರೋಪಿಯನ್ನು ಹಿಂಬಾಲಿಸಲು ಪ್ರಯತ್ನಿಸಿದರೂ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. “ಇನ್ನೂ ಕೆಲವೇ ಕ್ಷಣ ಮುಂಚಿತವಾಗಿ ವಿಡಿಯೋ ತೆರೆದಿದ್ದರೆ ಮುಖ ಸೆರೆಯಾಗುತ್ತಿತ್ತು” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆರೋಪಿಯನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಜೊತೆಗೆ ನಗರದಲ್ಲಿನ ಜಾಗಿಂಗ್ ಟ್ರ್ಯಾಕ್‌ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸುವ ಅಗತ್ಯವಿದೆ ಎಂಬ ಕೂಗು ಮತ್ತಷ್ಟು ಜೋರಾಗಿದೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

12 minutes ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

15 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

19 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago