Latest

ಸೌಜನ್ಯ ನ್ಯಾಯಕ್ಕಾಗಿ ಹೋರಾಟವೆ ತಪ್ಪಾ? ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಖಂಡಿಸಿದ ಪ್ರಕಾಶ್ ರಾಜ್

ಬೆಂಗಳೂರು, ಆಗಸ್ಟ್ 6 – ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ಮತ್ತೆ ಗದ್ದಲ ಮೆರೆಯುತ್ತಿದೆ. ಸೌಜನ್ಯ ಪರ ಹೋರಾಟಗಾರರು ಹಾಗೂ ಸ್ಥಳೀಯ ಗ್ರಾಮಸ್ಥರ ನಡುವೆ ಉಗ್ರ ವಾಗ್ವಾದದಿಂದ ಹೊಡೆದಾಟಕ್ಕೂ ಕಾರಣವಾಯಿತು. ಇತ್ತೀಚೆಗೆ ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಾಧಿಕಾರಿಗಳಿಗೆ ಅವಮಾನವಾಗುವ ರೀತಿಯಲ್ಲಿ ಯೂಟ್ಯೂಬ್ ಚಾನಲ್‌ಗಳಲ್ಲಿ ವೀಕ್ಷಣೆಗಾಗಿ ಸುದ್ದಿ ಪ್ರಸಾರ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕೆಲ ಯೂಟ್ಯೂಬರ್‌ಗಳನ್ನು ಸ್ಥಳೀಯರು ತೀವ್ರವಾಗಿ ವಿರೋಧಿಸಿ ಕ್ಷೇತ್ರದಿಂದ ಹೊರಹಾಕಿದ ಘಟನೆ ನಡೆದಿದೆ.

ಘಟನೆಯ ವೇಳೆ ಸ್ಥಳೀಯ ಯೂಟ್ಯೂಬರ್ಸ್‌ ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣ್ಣನವರ್‌, ಹರೀಶ್‌ ಹಾಗೂ ಕ್ಯಾಮೆರಾಮನ್ ನವೀನ್‌ ಮೇಲೆ ಹಲ್ಲೆ ನಡೆದಿದೆ. ಘಟನೆಯಿಂದ ಆಕ್ರೋಶಗೊಂಡ ಜನರು ಸ್ಥಳೀಯ ಧರ್ಮಸ್ಥಳ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ‘ಸುಳ್ಳು ಸುದ್ದಿಗಳಿಂದ ಕ್ಷೇತ್ರದ ಗೌರವ ಹಾನಿಗೊಳಗಾಗುತ್ತಿದೆ, ಎಸ್‌ಐಟಿ ತನಿಖೆ ಇಡೀ ಮುಕ್ತಾಯವಾಗಿಲ್ಲ, ಆದರೆ ಯೂಟ್ಯೂಬರ್‌ಗಳು ನೂರಾರು ಅಸ್ಥಿಪಂಜರ ಸಿಕ್ಕಿವೆ ಎನ್ನುವದಾಗಿಯೇ ಜನತೆಯಲ್ಲಿ ಭಯ ಹುಟ್ಟಿಸುತ್ತಿದ್ದಾರೆ’ ಎಂಬ ಅಭಿಪ್ರಾಯವನ್ನು ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಈ ವಿವಾದದ ಕುರಿತು ನಟ ಪ್ರಕಾಶ್‌ ರಾಜ್ ಟ್ವೀಟ್ ಮತ್ತು ವಿಡಿಯೋ ಪ್ರಕಟಣೆ ಮೂಲಕ ಪ್ರತಿಕ್ರಿಯೆ ನೀಡಿದ್ದು, ಸೌಜನ್ಯ ಪರವಾಗಿ ನ್ಯಾಯಕ್ಕಾಗಿ ಕೆಲಸ ಮಾಡುತ್ತಿರುವ ಪತ್ರಕರ್ತರ ಮೇಲೆ ನಡೆದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. “ಸತ್ಯ ಕೇಳುವುದು ತಪ್ಪಾ? ಗೂಂಡಾಗಳಿಂದಲೇ ಧರ್ಮಸ್ಥಳದ ಗೌರವಕ್ಕೆ ಕಳಂಕ ಬರುವ ಸ್ಥಿತಿ ನಿರ್ಮಾಣವಾಗುತ್ತಿದೆ. ಇಂಥವರನ್ನು ತಕ್ಷಣ ಬಂಧಿಸಿ, ಹಿಂದೆ ನಿಂತಿರುವವರ ಬಗ್ಗೆ ತನಿಖೆ ನಡೆಯಬೇಕು. ನ್ಯಾಯ ಕೇಳುವುದು ಪ್ರಜೆಗಳ ಹಕ್ಕು” ಎಂದು ಅವರು ಹೇಳಿದ್ದಾರೆ.

ಈ ಗೊಂದಲಕ್ಕೆ ಮತ್ತೊಂದು ಕಾರಣ ರಜತ್ ಅವರ ಭೇಟಿಯಾಗಿದೆ. ಬಿಗ್‌ಬಾಸ್ ಸ್ಪರ್ಧಿಯಾಗಿದ್ದ ರಜತ್ ಇಂದು ಧರ್ಮಸ್ಥಳಕ್ಕೆ ಬೇಟಿ ನೀಡಿದ್ದು, ಸೌಜನ್ಯ ಮನೆಗೆ ಭೇಟಿ ನೀಡಲು ಯತ್ನಿಸಿದ್ದರು. ಈ ವೇಳೆ ಕೆಲ ಯೂಟ್ಯೂಬರ್‌ಗಳು ಸೌಜನ್ಯ ಸಂಬಂಧಿತ ಪ್ರಶ್ನೆಗಳನ್ನು ಕೇಳಿ ಅವರ ಭೇಟಿಗೆ ಆಕ್ಷೇಪ ವ್ಯಕ್ತಪಡಿಸಿದರು. ಮಾತು ಮುಚಳಿಕೆಗೆ ತಿರುಗಿ ಸ್ಥಳೀಯ ಭಕ್ತರು ಯೂಟ್ಯೂಬರ್‌ಗಳ ಮೇಲೆ ದೌರ್ಜನ್ಯ ನಡೆಸಿದರು ಎಂದು ವರದಿಯಾಗಿದೆ.

ಇದೀಗ ಈ ವಿಷಯ ರಾಜ್ಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಧರ್ಮಸ್ಥಳದಲ್ಲಿ ನಡೆಯುತ್ತಿರುವ ಹಕ್ಕುಪಾಲು ವಿಚಾರ, ಮಾಧ್ಯಮಗಳ ನೈತಿಕತೆ ಮತ್ತು ಸ್ಥಳೀಯರ ಭಾವನೆಗಳ ನಡುವೆ ಕಠಿಣ ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8088070392

nazeer ahamad

Recent Posts

ಹಾಡಹಗಲೇ ಪಡಿತರ ಅಕ್ಕಿ ಸಾಗಾಟ: ಆಹಾರ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..!

ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…

19 hours ago

₹5 ಸಾವಿರಕ್ಕೆ ರೂಮ್‌ಗೆ ಬಂದ ಯುವತಿ; ಬಿಯರ್‌ನಲ್ಲಿ ಅಮಲು ಬೆರೆಸಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್!

ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…

1 day ago

₹20 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರವಾಸೋದ್ಯಮ ಇಲಾಖೆ ಅಧಿಕಾರಿ!

ಹಾವೇರಿ: ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಕೆಲಸ ಮಾಡಿಕೊಡಲು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಅಧಿಕಾರಿಯೊಬ್ಬರು ಲೋಕಾಯುಕ್ತ…

1 day ago

ವಿವಾಹಿತ ಮಹಿಳೆ ಜೊತೆ ಬಾಯ್‌ಫ್ರೆಂಡ್‌ ಪರಾರಿ? ಕಣ್ಣೀರಿಟ್ಟ ದೆಹಲಿ ಬ್ಲಾಗರ್; “ನನ್ನನ್ನು ಬಿಟ್ಟು ಆಕೆಯಲ್ಲೇನಿತ್ತು?”

ನವದೆಹಲಿ: ತನ್ನ ಪ್ರಿಯಕರ ಮತ್ತೊಬ್ಬ ಮಹಿಳೆಯೊಂದಿಗೆ ತೆರಳಿದ್ದಾನೆ ಎಂದು ಆರೋಪಿಸಿ ದೆಹಲಿ ಮೂಲದ ಖ್ಯಾತ ಬ್ಲಾಗರ್ ಶ್ವೇತಾ ದ್ವಿವೇದಿ ಸಾಮಾಜಿಕ…

1 day ago

ನಕಲಿ ಮಾಲೀಕರನ್ನು ನಿಲ್ಲಿಸಿ ₹1.08 ಕೋಟಿ ಮೌಲ್ಯದ ಜಮೀನು ಮಾರಾಟ: ನಾಲ್ವರ ವಿರುದ್ಧ FIR

ಬಳ್ಳಾರಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಿಜವಾದ ಜಮೀನು ಮಾಲೀಕರ ಹೆಸರನ್ನು ದುರುಪಯೋಗಪಡಿಸಿಕೊಂಡು ಸುಮಾರು ₹1.08 ಕೋಟಿ ಮೌಲ್ಯದ ಜಮೀನನ್ನು ವಂಚನೆಯಿಂದ…

1 day ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಮುಂದುವರಿಕೆ; ವಿಚಾರಣೆಯಲ್ಲಿ ಸ್ಫೋಟಕ ಅಂಶಗಳ ಉಲ್ಲೇಖ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಮಹತ್ವದ ಹಂತ ತಲುಪಿದೆ. ಪ್ರಕರಣದಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್ ರಾವ್ ಮಾಫಿ…

2 days ago