Categories: LatestNationalWorld

ಭಾರತ ಸೇರಿದಂತೆ ಏಷ್ಯಾದಲ್ಲಿ ದಾಳಿಗೆ ಐಸಿಸ್ ಕರೆ: ಭದ್ರತಾ ಸಂಸ್ಥೆಗಳಿಗೆ ಎಚ್ಚರಿಕೆ

ಜಾಗತಿಕ ಭಯೋತ್ಪಾದಕ ಸಂಘಟನೆ ಐಸಿಸ್ (ಇಸ್ಲಾಮಿಕ್ ಸ್ಟೇಟ್) ಭಾರತ ಸೇರಿದಂತೆ ದಕ್ಷಿಣ ಮತ್ತು ಆಗ್ನೇಯ ಏಷ್ಯಾದಲ್ಲಿ ಹಿಂದೂ ಸಮುದಾಯವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವಂತೆ ತನ್ನ ಬೆಂಬಲಿಗರಿಗೆ ಕರೆ ನೀಡಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಂದಿದೆ.

‘ಕೌಂಟರ್ ಎಕ್ಸ್ಟ್ರೀಮಿಸಂ ಪ್ರಾಜೆಕ್ಟ್’ (ಸಿಇಪಿ) ವರದಿ ಪ್ರಕಾರ, ಮಾರ್ಚ್ 9ರಂದು ಐಸಿಸ್ ಬೆಂಬಲಿತ ವ್ಯಕ್ತಿಯೊಬ್ಬ ಆನ್‌ಲೈನ್ ವೇದಿಕೆಗಳ ಮೂಲಕ ಹಿಂದೂಗಳ ಮೇಲೆ ದಾಳಿ ನಡೆಸುವಂತೆ ಪ್ರಚೋದನಾಕಾರಿ ಸಂದೇಶ ಹಂಚಿಕೊಂಡಿದ್ದಾನೆ. ಈ ಸಂದೇಶದಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ, ತ್ರಿಪುರಾ, ಮಣಿಪುರ ರಾಜ್ಯಗಳು ಹಾಗೂ ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಪ್ರದೇಶಗಳನ್ನು ಗುರಿಯಾಗಿಸಲಾಗಿದೆ. ಟೆಲಿಗ್ರಾಮ್ ಹಾಗೂ ರಾಕೆಟ್‌ ಚಾಟ್‌ಂತಹ ಗುಪ್ತ ಆಪ್‌ಗಳ ಮೂಲಕ ಈ ಸಂದೇಶ ವ್ಯಾಪಕವಾಗಿ ಹರಡಲಾಗಿದೆ.

ಇದಲ್ಲದೆ, ಅಮೆರಿಕಾದಲ್ಲಿ ನಡೆದ ಹಿಂಸಾಚಾರ ಘಟನೆಗಳನ್ನೂ ಐಸಿಸ್ ಬೆಂಬಲಿಗರು ಶ್ಲಾಘಿಸಿರುವುದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ನ್ಯೂಯಾರ್ಕ್ ಹಾಗೂ ಓಲ್ಡ್ ಡೊಮಿನಿಯನ್ ವಿಶ್ವವಿದ್ಯಾಲಯದಲ್ಲಿ ನಡೆದ ದಾಳಿಗಳನ್ನೂ ಉಗ್ರರು ಪ್ರಶಂಸಿಸಿದ್ದಾರೆ. ಈ ದಾಳಿಯಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು ‘ಹುತಾತ್ಮ’ ಎಂದು ಕರೆದಿರುವುದು ಗಮನಾರ್ಹ.

ಐಸಿಸ್ ತನ್ನ ಪ್ರಚಾರ ಚಟುವಟಿಕೆಗಳನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಇತ್ತೀಚೆಗೆ ಹಲವು ಪ್ರಚೋದನಾಕಾರಿ ವಿಡಿಯೋಗಳನ್ನು ಬಿಡುಗಡೆ ಮಾಡಿದೆ. ಈ ವಿಡಿಯೋಗಳಲ್ಲಿ ಪಶ್ಚಿಮ ದೇಶಗಳ ವಿರುದ್ಧ ದ್ವೇಷ ಹರಡುವ ಜೊತೆಗೆ ದಾಳಿ ನಡೆಸಲು ಪ್ರೇರೇಪಣೆ ನೀಡಲಾಗಿದೆ. ಜೊತೆಗೆ, ಸಂಘಟನೆ ತನ್ನ ಜಾಲ ವಿಸ್ತರಣೆ ಹಾಗೂ ಹಣ ಸಂಗ್ರಹಕ್ಕಾಗಿ ಆನ್‌ಲೈನ್ ಬಾಟ್‌ಗಳು ಮತ್ತು ಮೆಸೇಜಿಂಗ್ ಆಪ್‌ಗಳನ್ನು ಬಳಸುತ್ತಿದೆ.

ಕಳೆದ ಒಂದು ವಾರದಲ್ಲಿ ನೈಜೀರಿಯಾ, ಸಿರಿಯಾ, ಪಾಕಿಸ್ತಾನ ಸೇರಿದಂತೆ ಹಲವು ದೇಶಗಳಲ್ಲಿ ನಡೆದ ದಾಳಿಗಳ ಹೊಣೆಗಾರಿಕೆಯನ್ನು ಐಸಿಸ್ ಹೊತ್ತಿರುವುದಾಗಿ ವರದಿ ತಿಳಿಸಿದೆ.

ಭಾರತದ ಗಡಿ ರಾಜ್ಯಗಳಲ್ಲಿ ಇಂತಹ ಪ್ರಚೋದನಾಕಾರಿ ಸಂದೇಶಗಳು ಹರಡುತ್ತಿರುವುದು ಭದ್ರತಾ ಸಂಸ್ಥೆಗಳಿಗೆ ಗಂಭೀರ ಸವಾಲಾಗಿ ಪರಿಣಮಿಸಿದೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

11 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

15 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago