ಜೈಪುರ, ಜುಲೈ 9: ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದ್ದು, ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧವಿಮಾನವೊಂದು ಭನೋಡ್ ಪ್ರದೇಶದಲ್ಲಿ ಪತನವಾಗಿದೆ. ಈ ದುರಂತದಲ್ಲಿ ಇಬ್ಬರು ಪೈಲಟ್‌ಗಳು ದುರ್ಮರಣ ಹೊಂದಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಪತನವಾದ ನಂತರ ವಿಮಾನದಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಸ್ಥಳದಲ್ಲಿ ಬೆಂಕಿ ಉಂಟಾಗಿದೆ. ಸ್ಥಳೀಯರು ನೀಡಿದ ಮಾಹಿತಿಯಿಂದಾಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ತಕ್ಷಣವೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಕ್ಕಪಕ್ಕದ ಪ್ರದೇಶದ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕ್ರಮ ಕೈಗೊಳ್ಳಲಾಗಿದೆ.

ವಿಮಾನ ಯಾವ ಸಂದರ್ಭದಲ್ಲಿ, ಏನು ಕಾರಣದಿಂದ ಪತನಗೊಂಡಿತೆಂಬ ಬಗ್ಗೆ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ವಿಮಾನ ಪತನದ ಪರಿಣಾಮವಾಗಿ ಸ್ಥಳದಲ್ಲಿ ಆಸ್ತಿ ನಷ್ಟ ಸಂಭವಿಸಿರುವ ಸಾಧ್ಯತೆಯೂ ಇದ್ದು, ಹೆಚ್ಚಿನ ಮಾಹಿತಿಗಾಗಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಕುರಿತು ವಾಯುಪಡೆಯಿಂದ ಅಧಿಕೃತ ಪ್ರೆಸ್ ನೋಟ ನಿರೀಕ್ಷಿಸಲಾಗುತ್ತಿದೆ.

error: Content is protected !!