ಜೈಪುರ, ಜುಲೈ 9: ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದ್ದು, ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧವಿಮಾನವೊಂದು ಭನೋಡ್ ಪ್ರದೇಶದಲ್ಲಿ ಪತನವಾಗಿದೆ. ಈ ದುರಂತದಲ್ಲಿ ಇಬ್ಬರು ಪೈಲಟ್‌ಗಳು ದುರ್ಮರಣ ಹೊಂದಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಪತನವಾದ ನಂತರ ವಿಮಾನದಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಸ್ಥಳದಲ್ಲಿ ಬೆಂಕಿ ಉಂಟಾಗಿದೆ. ಸ್ಥಳೀಯರು ನೀಡಿದ ಮಾಹಿತಿಯಿಂದಾಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ತಕ್ಷಣವೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಕ್ಕಪಕ್ಕದ ಪ್ರದೇಶದ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕ್ರಮ ಕೈಗೊಳ್ಳಲಾಗಿದೆ.
ವಿಮಾನ ಯಾವ ಸಂದರ್ಭದಲ್ಲಿ, ಏನು ಕಾರಣದಿಂದ ಪತನಗೊಂಡಿತೆಂಬ ಬಗ್ಗೆ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ವಿಮಾನ ಪತನದ ಪರಿಣಾಮವಾಗಿ ಸ್ಥಳದಲ್ಲಿ ಆಸ್ತಿ ನಷ್ಟ ಸಂಭವಿಸಿರುವ ಸಾಧ್ಯತೆಯೂ ಇದ್ದು, ಹೆಚ್ಚಿನ ಮಾಹಿತಿಗಾಗಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಕುರಿತು ವಾಯುಪಡೆಯಿಂದ ಅಧಿಕೃತ ಪ್ರೆಸ್ ನೋಟ ನಿರೀಕ್ಷಿಸಲಾಗುತ್ತಿದೆ.
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…