Latest

ಜಾಮಿಯಾ ಮಿಲಿಯಾ ಇಸ್ಲಾಮಿಯಾ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ ಆರೋಪ: ಮೆಸ್ ಕೆಲಸಗಾರ ಬಂಧನ

ದೆಹಲಿ: ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಆವರಣದಲ್ಲಿ 24 ವರ್ಷದ ಕಾಶ್ಮೀರಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮೆಸ್ ಕೆಲಸಗಾರನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯನ್ನು ದೆಹಲಿ ಪೊಲೀಸರು ಸೋಮವಾರ (ಏಪ್ರಿಲ್ 28) ದೃಢಪಡಿಸಿದ್ದಾರೆ.

ಪೊಲೀಸ್ ಪ್ರಕಾರ, ಏಪ್ರಿಲ್ 27ರಂದು ರಾತ್ರಿ ಸುಮಾರು 9:30ರ ಸುಮಾರಿಗೆ, ದ್ವಿತೀಯ ಎಂಎ ವಿದ್ಯಾರ್ಥಿನಿಯೊಬ್ಬಳಿಗೆ ಮೆಸ್‌ನಲ್ಲಿ ಕೆಲಸ ಮಾಡುತ್ತಿದ್ದ 22 ವರ್ಷದ ಅಬಿದ್ ಎಂಬಾತ ಎದೆಗೆ ಹಲ್ಲೆ ನಡೆಸಿದ ಎಂದು ಆರೋಪಿಸಲಾಗಿದೆ. ಈ ಘಟನೆ ನಂತರ ಪೊಲೀಸರಿಗೆ ಮಾಹಿತಿ ನೀಡಲಾಯಿತು ಮತ್ತು ಆರೋಪಿಯನ್ನು ಕೂಡಲೇ ಬಂಧಿಸಲಾಯಿತು.

ಪೊಲೀಸರ ಪ್ರಕಾರ, “ವಿದ್ಯಾರ್ಥಿನಿ ಇನ್ನೂ ಅಧಿಕೃತವಾಗಿ ದೂರು ದಾಖಲಿಸಿಲ್ಲ. ಇಂದು ದೂರು ನೀಡುವ ನಿರೀಕ್ಷೆಯಿದ್ದು, ಅದರ ನಂತರ ಪ್ರಕರಣ ದಾಖಲಿಸಲಾಗುವುದು. ಹಲ್ಲೆ ಹಿಂದಿನ ಕಾರಣವಾಗಿ ವ್ಯಕ್ತಿಗತ ವಿಚಾರಗಳಿಂದ ಉಂಟಾದ ವಾಗ್ವಾದವೊಂದು ಉಲ್ಲೇಖಿಸಲಾಗಿದೆ,” ಎಂದು ತಿಳಿಸಿದರು.

ಈ ಮಧ್ಯೆ, ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳ ಭದ್ರತೆ ಕುರಿತ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿವೆ. ಅಧಿಕಾರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಹೇಳಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

17 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago