ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ ತೂಕದ ಗಾಂಜಾ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು ₹50,000 ಎಂದು ಅಂದಾಜಿಸಲಾಗಿದೆ.
ಸೋಮವಾರ ದಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಮಂಡ್ಯ ಉಪ ಆಯುಕ್ತರ ಕಚೇರಿಯ ಎಸ್‌ಐ ನಾಗಭೂಷಣ್ ಹಾಗೂ ಕೆ.ಆರ್.ಪೇಟೆ ಅಬಕಾರಿ ಇನ್‌ಸ್ಪೆಕ್ಟರ್ ದೀಪಕ್ ನೇತೃತ್ವದಲ್ಲಿ ದಾಳಿ ನಡೆಸಿದರು. ಈ ವೇಳೆ ಜಮೀನಿನ ಮಾಲೀಕ ಬೋರಲಿಂಗೇಗೌಡ ಅವರನ್ನು ಬಂಧಿಸಿ, ಗಾಂಜಾ ಸಹಿತ ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣವನ್ನು ನಾರ್ಕೋಟಿಕ್ ಡ್ರಗ್ಸ್ ಅಂಡ್ ಸೈಕೊಟ್ರಾಪಿಕ್ ಸಬ್‌ಸ್ಟೆನ್ಸಸ್ (ಎನ್‌ಡಿಪಿಎಸ್) ಕಾಯ್ದೆಯಡಿ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ ಎಂದು ಎಸ್‌ಐ ನಾಗಭೂಷಣ್ ಮಾಹಿತಿ ನೀಡಿದರು.
ಕಾರ್ಯಾಚರಣೆಯಲ್ಲಿ ಬೂಕನಕೆರೆ ಹೋಬಳಿಯ ರಾಜಸ್ವ ನಿರೀಕ್ಷಕಿ ಚಂದ್ರಕಲಾ, ಅಬಕಾರಿ ಹೆಡ್ ಕಾನ್‌ಸ್ಟೆಬಲ್ ಅನಿಲ್ ಕುಮಾರ್, ದಿನೇಶ್ ಎಂ.ಎಸ್., ಹಾಗೂ ಪೇದೆಗಳಾದ ಗಂಗಾಧರ್, ಚಂದ್ರಶೇಖರ, ನಾಗಪ್ಪ, ಸಂತೋಷ ಕುಮಾರ್ ಮತ್ತು ಜಮೀರ್ ಸೇರಿದ್ದರು.
ಈ ಕಾರ್ಯಾಚರಣೆ ಮೂಲಕ ಗಾಂಜಾ ಕೃಷಿಗೆ ತಡೆ ನೀಡುವ ಅಬಕಾರಿ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ.
ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…