ಗೋಕಾಕ ನಗರದ ಲೋಕೋಪಯೋಗಿ ಇಲಾಖೆಯ ವಸತಿ ಪ್ರದೇಶದಲ್ಲಿರುವ ತಹಸೀಲ್ದಾರ್ ಮನೆಗೆ ಕಳ್ಳರು ಕನ್ನ ಹಾಕಿದ್ದಾರೆ. ಗೋಕಾಕ ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಕಳ್ಳತನ ಆಗಿದ್ದು, ಸುಮಾರು 40 ತೊಲ ಚಿನ್ನ, 20 ಗ್ರಾಂ ಬೆಳ್ಳಿ, 5 ಸಾವಿರ ನಗದು ಎಗರಿಸಿ ಪರಾರಿ ಆಗಿದ್ದಾರೆ.
ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರು ಕೆಲಸದ ನಿಮಿತ್ತ ಮೈಸೂರಿಗೆ ಹೋಗಿದ್ದರು ಮನೆಯಲ್ಲಿ ಯಾರು ಇಲ್ಲದ್ದನ್ನು ಖಚಿತಪಡಿಸಿಕೊಂಡ ಖದೀಮರು ರಾತ್ರಿ ಮನೆ ಬಾಗಿಲು ಮುರಿದು ಕಳ್ಳತನ ಮಾಡಿದ್ದಾರೆ. ಭಾನುವಾರ ಮಧ್ಯಾಹ್ನ ಕ್ಲೀನರ್ ಬಂದು ನೋಡಿದಾಗ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೆರಳಚ್ಚು ತಜ್ಞರು, ಗೋಕಾಕ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕನ ಜನತೆ ಆಗಾಗ ನಡೆಯುವ ಕಳ್ಳತನ ಪ್ರಕರಣಗಳಿಂದ ರೋಸಿ ಹೋಗಿದ್ದು, ಲೋಕೊಪಯೋಗಿ ವಸತಿ ಗೃಹದಲ್ಲಿ ಇರುವ ಗೋಕಾಕ ತಹಸೀಲ್ದಾರ್ ಮನೆಗೂ ಕಳ್ಳರು ಕನ್ನ ಹಾಕಿರುವುದು ಆತಂಕ ಹೆಚ್ಚಿಸಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…