Latest

ತಹಶೀಲ್ದಾರ್ ಮನೆಗೆ ಕನ್ನ; ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು.

ಗೋಕಾಕ ನಗರದ ಲೋಕೋಪಯೋಗಿ ಇಲಾಖೆಯ ವಸತಿ ಪ್ರದೇಶದಲ್ಲಿರುವ ‌ತಹಸೀಲ್ದಾರ್ ಮನೆಗೆ ಕಳ್ಳರು ಕನ್ನ ಹಾಕಿದ್ದಾರೆ. ಗೋಕಾಕ ತಹಸೀಲ್ದಾರ್‌ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಕಳ್ಳತನ ಆಗಿದ್ದು, ಸುಮಾರು 40 ತೊಲ ಚಿನ್ನ, 20 ಗ್ರಾಂ ಬೆಳ್ಳಿ, ‌5 ಸಾವಿರ ನಗದು ಎಗರಿಸಿ ಪರಾರಿ ಆಗಿದ್ದಾರೆ.
ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರು ಕೆಲಸದ ನಿಮಿತ್ತ ಮೈಸೂರಿಗೆ ಹೋಗಿದ್ದರು ಮನೆಯಲ್ಲಿ ಯಾರು ಇಲ್ಲದ್ದನ್ನು ಖಚಿತಪಡಿಸಿಕೊಂಡ ಖದೀಮರು ರಾತ್ರಿ ಮನೆ ಬಾಗಿಲು ಮುರಿದು ಕಳ್ಳತನ ಮಾಡಿದ್ದಾರೆ. ಭಾನುವಾರ ಮಧ್ಯಾಹ್ನ‌ ಕ್ಲೀನರ್ ಬಂದು ನೋಡಿದಾಗ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೆರಳಚ್ಚು ತಜ್ಞರು, ಗೋಕಾಕ ‌ನಗರ ಪೊಲೀಸರು ‌ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕನ ಜನತೆ ಆಗಾಗ ನಡೆಯುವ ಕಳ್ಳತನ ಪ್ರಕರಣಗಳಿಂದ ರೋಸಿ ಹೋಗಿದ್ದು, ಲೋಕೊಪಯೋಗಿ ವಸತಿ ಗೃಹದಲ್ಲಿ ಇರುವ ಗೋಕಾಕ ತಹಸೀಲ್ದಾರ್ ಮನೆಗೂ ಕಳ್ಳರು ಕನ್ನ ಹಾಕಿರುವುದು ಆತಂಕ ಹೆಚ್ಚಿಸಿದೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

2 days ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

2 days ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

6 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

6 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

6 days ago