Latest

ಮನೆಗೆ ಕನ್ನ ಹಾಕುತ್ತಿದ್ದ ಮತ್ತು ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಖದೀಮರು ಪೊಲೀಸರ ಬಲೆಗೆ!

ಮೈಸೂರು ನಗರ ಸಿ.ಸಿ.ಬಿ. ಪೊಲೀಸರು ವಿಜಯನಗರ ಪೊಲೀಸ್ ಠಾಣಾ ಕನ್ನಾ ಕಳುವು ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಾಂಕ: ೧೮/೦೭/೨೦೨೨ ರಂದು ಮೈಸೂರು ನಗರ ಸಿಟಿ ಬಸ್ ನಿಲ್ದಾಣದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿ, ಈತನು ತನ್ನ ಇನ್ನಿಬ್ಬರು ಸಹಚರರೊಂದಿಗೆ ಸೇರಿಕೊಂಡು ಮೈಸೂರು ನಗರ, ಮೈಸೂರು ಜಿಲ್ಲೆ, ಮಂಡ್ಯ ಜಿಲ್ಲೆ, ಬೆಂಗಳೂರು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಮನೆ ಕನ್ನ ಕಳುವು ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನು ನೀಡಿದ ಮಾಹಿತಿ ಮೇರೆಗೆ ಈ ಕಳುವು ಪ್ರಕರಣಗಳಲ್ಲಿ ಮಾಲುಗಳನ್ನು ಸ್ವೀಕರಿಸಿ ವಿಲೇವಾರಿ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ದಿನಾಂಕ: ೧೮/೦೭/೨೦೨೨ ರಂದು ದಸ್ತಗಿರಿ ಮಾಡಲಾಗಿದ್ದು, ಸದರಿ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಒಟ್ಟು ೦೯ ಮನೆ ಕನ್ನ ಕಳುವು ಪ್ರಕರಣಗಳಿಗೆ ಸಂಬಂಧಪಟ್ಟಂತೆ, ರೂ. ೧೦,೧೫,೦೦೦/- ಮೌಲ್ಯದ ೧೯೧ ಗ್ರಾಂ ತೂಕದ ಚಿನ್ನಾಭರಣಗಳು, ೧ಕೆ.ಜಿ.೩೩೦ ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು ಒಂದು ಏರ್‌ಗನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ೧ನೇ ಆರೋಪಿಯು ತನ್ನ ಬಾಲ್ಯಾವಸ್ಥೆಯಿಂದಲೂ ಮನೆಗಳ್ಳತನ ಮಾಡಿ, ಬಾಲ ಮಂದಿರದಲ್ಲಿದ್ದು, ಅಲ್ಲಿಂದ ತಪ್ಪಿಸಿಕೊಂಡು ಹೋಗಿ, ನಂತರ ಪ್ರಾಪ್ತ ವಯಸ್ಕಾನಾದ ನಂತರವು ತನ್ನ ಕಳ್ಳತನದ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಬಂದಿರುವುದು ವಿಚಾರಣೆಯಿಂದ ತಿಳಿದು ಬಂದಿರುತ್ತದೆ. ಉಳಿದ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ.
ಈ ಪತ್ತೆ ಕಾರ್ಯದಿಂದ ಮೈಸೂರು ನಗರ ವಿಜಯನಗರ ಠಾಣೆಯ-೦೧, ಮೇಟಗಳ್ಳಿ-೦೧, ಇಲವಾಲ -೦೨, ಮೈಸೂರು ದಕ್ಷಿಣ ಠಾಣೆ-೦೩, ಕೆ.ಆರ್.ಎಸ್. ಠಾಣೆ-೦೧, ಬೆಂಗಳೂರು ಜಿಲ್ಲೆಯ ಕುಂಬಳಗೋಡು ಠಾಣೆ-೦೧ ಮನೆ ಕನ್ನ ಕಳುವು ಪ್ರಕರಣಗಳು ಪತ್ತೆಯಾಗಿರುತ್ತವೆ.
ಸಿ.ಸಿ.ಬಿ. ಪೊಲೀಸರು ಲಕ್ಷ್ಮೀಪುರಂ ಪೊಲೀಸ್ ಠಾಣೆಯ ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಒಬ್ಬ ಆರೋಪಿಯನ್ನು ದಿನಾಂಕ: ೨೯/೦೬/೨೦೨೨ ರಂದು ದಸ್ತಗಿರಿ ಮಾಡಿ ವಿಚಾರಣೆ ಮಾಡಲಾಗಿ, ಈತನು ಮೈಸೂರು ನಗರ, ಬೆಂಗಳೂರು, ರಾಮನಗರ ಜಿಲ್ಲೆಯ ವಿವಿಧ ಕಡೆಗಳಲ್ಲಿ ದ್ವಿ ಚಕ್ರ ವಾಹನಗಳನ್ನು ಕಳ್ಳತನ ಮಾಡಿರುವುದಾಗಿ ತಿಳಿಸಿದರ ಮೇರೆಗೆ ಆರೋಪಿತನಿಂದ ರೂ. ೯,೦೦,೦೦೦/- ಮೌಲ್ಯದ ವಿವಿಧ ಕಂಪನಿಯ ೦೬ ದ್ವಿ ಚಕ್ರ ವಾಹನಗಳನ್ನು ಅಮಾನತ್ತುಪಡಿಸಿಕೊಂಡಿರುತ್ತಾರೆ.
ಈ ಪತ್ತೆ ಕಾರ್ಯದಿಂದ ಮೈಸೂರು ನಗರ ಲಕ್ಷ್ಮೀಪುರಂ ಠಾಣೆಯ-೦೨, ಬೆಂಗಳೂರು ಬ್ಯಾಟರಾಯನಪುರ-೦೧, ರಾಜರಾಜೇಶ್ವರಿ ನಗರ-೦೧, ಚಾಮರಾಜಪೇಟೆ-೦೧, ರಾಮನಗರ ಜಿಲ್ಲೆಯ ಚನ್ನಪಟ್ಟಣ ಠಾಣೆ-೦೧ ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಗಳು ಪತ್ತೆಯಾಗಿರುತ್ತವೆ.
ಮೇಲ್ಕಂಡ ೨ ಪ್ರಕರಣಗಳ ಪತ್ತೆ ಕಾರ್ಯವನ್ನು ಮೈಸೂರು ನಗರದ ಡಿ.ಸಿ.ಪಿ. ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಶ್ರೀಮತಿ. ಗೀತ ಎಂ.ಎಸ್., ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಎ.ಸಿ.ಪಿ.ರವರಾದ ಶ್ರೀ ಸಿ.ಕೆ.ಅಶ್ವತ್ಥನಾರಾಯಣರವರ ನೇತೃತ್ವದಲ್ಲಿ ಸಿ.ಸಿ.ಬಿ. ಹೆಚ್&ಬಿ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್‌ರವರಾದ ಶ್ರೀ. ಶೇಖರ್.ಜಿ ರವರು ಮತ್ತು ಇತರೇ ಅಧಿಕಾರಿ ಮತ್ತು ಸಿಬ್ಬಂದಿಗಳು ಮಾಡಿರುತ್ತಾರೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago