Latest

ವಿಷ್ಣುವರ್ಧನ್ ಸ್ಮಾರಕ ತೆರವುಗೆ ಕಿಚ್ಚ ಸುದೀಪ್ ಆಕ್ರೋಶ:ನಾನೇ ಮುಂದೆ ನಿಂತು ವಿಷ್ಣುವರ್ಧನ್ ಸ್ಮಾರಕ ಮರುಸ್ಥಾಪನೆ ಮಾಡುತ್ತೇನೆ”

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಗಳಿಗೆ ನಿನ್ನೆ ದೊಡ್ಡ ಆಘಾತವಾಯಿತು. ಅಭಿಮಾನ್ ಸ್ಟುಡಿಯೋ ಆವರಣದಲ್ಲಿ ನಿರ್ಮಿಸಲಾಗಿದ್ದ ಅವರ ಸ್ಮಾರಕವನ್ನು ತೆರವುಗೊಳಿಸಲಾಗಿತ್ತು. ಈ ಬೆಳವಣಿಗೆ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದ್ದು, ನಟ ಕಿಚ್ಚ ಸುದೀಪ್ ಭಾವೋದ್ರಿಕ್ತವಾಗಿ ಪ್ರತಿಕ್ರಿಯಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಭಾವನೆ ಹಂಚಿಕೊಂಡ ಸುದೀಪ್, “ವಿಷ್ಣುವರ್ಧನ್ ಎಂದರೆ ಅದು ಎಂದಿಗೂ ಮುಗಿಯದ ಅಭಿಮಾನ ಮತ್ತು ಗೌರವ. ಅವರ ಸ್ಮಾರಕವನ್ನು ಒಡೆದು ಹಾಕಿರುವುದು, ನಮ್ಮ ನಂಬಿಕೆಯ ದೇವಾಲಯವನ್ನು ಧ್ವಂಸ ಮಾಡಿದಂತೆ ನೋವುಂಟುಮಾಡಿದೆ. ಇದು ಹೈಕೋರ್ಟ್ ಆದೇಶ ಅಂತಾರೆ, ಆದರೆ ಸರ್ಕಾರದ ಮೂಲಕ ಸ್ಮಾರಕ ಉಳಿಸಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಮಂತ್ರಿಗಳಿಗೆ ಮನವಿ ಮಾಡಿದ್ದೆ, ಹಣಕಾಸು ಬೇಕಾದರೂ ಕೊಡಲು ಸಿದ್ಧ ಅಂತ ನಾನೇ ಹೇಳಿದ್ದೆ. ಆದರೆ ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಅನ್ನಿಸುವಂತೆ ಇದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸುದೀಪ್ ಮುಂದುವರಿದು, “ಮೈಸೂರಿನಲ್ಲಿ ಈಗಾಗಲೇ ಅಧಿಕೃತ ಸ್ಮಾರಕವಿದೆ ಎಂದು ಕೋರ್ಟ್ ಹೇಳಿದೆ. ಕೋರ್ಟ್ ವಿರುದ್ಧವಾಗಿ ಮಾತನಾಡಲು ಆಗುವುದಿಲ್ಲ. ಆದರೆ, ಭೂಮಿ ಖರೀದಿಸಿದವರ ಮನ ಒಲಿಸಿ, ಕನಿಷ್ಠ ಆ ಜಾಗದ ಒಂದು ಭಾಗವನ್ನು ಉಳಿಸಲು ನಾನು ಸಿದ್ಧನಿದ್ದೇನೆ. ಸರ್ಕಾರ ಮಧ್ಯಪ್ರವೇಶಿಸಿದರೆ ಸಮಸ್ಯೆ ಬಗೆಹರಿಯುತ್ತದೆ” ಎಂದರು.

ವಿಷ್ಣುವರ್ಧನ್ ಅವರ ಆಧ್ಯಾತ್ಮ ಪ್ರೀತಿಯನ್ನು ನೆನೆದು ಸುದೀಪ್ ಹೇಳಿದರು, “ಅವರು ರೂಪಕವಾಗಬೇಕು, ಪಂಚಭೂತಗಳಲ್ಲಿ ಇರಬೇಕು ಅಂತ ಹೇಳುತ್ತಿದ್ದರು. ಆದರೆ ಅಭಿಮಾನಿಗಳಿಗೆ ಪೂಜೆ ಮಾಡಲು, ಜನ್ಮದಿನ ಆಚರಿಸಲು, ಗೌರವ ಸಲ್ಲಿಸಲು ಒಂದು ಸ್ಥಳ ಅಗತ್ಯ. ಬೆಂಗಳೂರಿನಂತಹ ನಗರದಲ್ಲಿ ಅರ್ಧ ಎಕರೆ ಜಾಗ ಕೊಡಲಿಲ್ಲ ಅಂದರೆ, ಇದು ಖಂಡನೀಯ. ಬಾಲಕೃಷ್ಣ ಅವರ ಸಮಾಧಿಯನ್ನೂ ತೆರವುಗೊಳಿಸಲಾಗಿದೆ ಎಂದು ಕೇಳಿದ್ದೇನೆ. ಇವೆಲ್ಲ ಭಾವನೆಗಿಂತ ಭೂಮಿ ವ್ಯವಹಾರ ದೊಡ್ಡದಾಗಿದೆ ಎನ್ನಿಸುವಂತಿದೆ” ಎಂದು ವ್ಯಥೆ ವ್ಯಕ್ತಪಡಿಸಿದರು.

“ನ್ಯಾಯಾಲಯಕ್ಕೆ ಹೋಗಬೇಕಾದರೆ, ನಾನೂ ಸಿದ್ಧ. ಭೂಮಿ ಮಾಲೀಕರು, ಸರ್ಕಾರ, ನ್ಯಾಯಾಲಯ – ಎಲ್ಲರಿಗೂ ನನ್ನ ಮನವಿ, ಬೇಕಾದ ಹಣವನ್ನು ನಾವು ಲಕ್ಷಾಂತರ ಅಭಿಮಾನಿಗಳು ಸೇರಿ ಕೊಡಲು ಸಿದ್ಧರಿದ್ದೇವೆ. ನಾನೇ ಮುಂದೆ ನಿಂತು ಸ್ಮಾರಕ ಮರುಸ್ಥಾಪನೆ ಮಾಡುತ್ತೇನೆ. ವಿಷ್ಣು ಸರ್ ಸದಾ ನಮ್ಮ ಹೃದಯಗಳಲ್ಲಿ ಇರುತ್ತಾರೆ. ಆದರೆ ಪ್ರಾರ್ಥನೆ, ಗೌರವಕ್ಕೆ ಒಂದು ಸಂಕೇತ ಸ್ಥಳ ಬೇಕು. ಆ ಪ್ರೀತಿಗೆ, ಅಭಿಮಾನಕ್ಕೆ ದ್ರೋಹ ಮಾಡಬೇಡಿ” ಎಂದು ಸುದೀಪ್ ತಮ್ಮ ಪೋಸ್ಟ್‌ನಲ್ಲಿ ವಿನಂತಿಸಿದರು.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

3 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

18 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

22 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago