Latest

ಗಂಡ, ಅತ್ತೆಯನ್ನು ಕೊಂದು ಬ್ರಿಡ್ಜ್ ನಲ್ಲಿ ಶವವಿಟ್ಟ ಕಿಲಾಡಿ ಲೇಡಿ.

ದೆಹಲಿಯಲ್ಲಿ ಶ್ರದ್ಧಾ ವಾಕರ್‌ ಹತ್ಯೆಗೈದು ದೇಹವನ್ನು ಕತ್ತರಿಸಿ ರೆಫ್ರಿಜರೇಟರ್‌ನಲ್ಲಿಟ್ಟ ಘಟನೆ ಬೆಳಕಿಗೆ ಬಂದ ಬಳಿಕ ಶವವನ್ನು ಫ್ರೀಡ್ಜರ್‌ನಲ್ಲಿಟ್ಟ ಹಲವು ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದೀಗ ಗುವಾಹಟಿಯಿಂದ ಇಂತಹದ್ದೇ ಒಂದು ಘಟನೆ ವರದಿಯಾಗಿದ್ದು, ಮಹಿಳೆಯೊಬ್ಬಳು ತನ್ನ ಗಂಡ ಮತ್ತು ಅತ್ತೆಯನ್ನು ಹತ್ಯೆಗೈದು ಹೆಣ ಅಡಗಿಸಿಡುವ ಉದ್ದೇಶದಿಂದ ಇಬ್ಬರ ಶವವನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟು ಬಳಿಕ ನದಿಗೆ ಎಸೆದಿದ್ದಾಳೆ. ಅಸ್ಸಾಂ ಪೊಲೀಸರು ಈಕೆಯನ್ನು ವಿಚಾರಣೆ ನಡೆಸಿದ್ದು, ಅತ್ತೆ ಮತ್ತು ಗಂಡನನ್ನು ಕೊಲೆ ಮಾಡಿ ದೇಹವನ್ನು ಕತ್ತರಿಸಿ ದೇಹದ ಭಾಗಗಳನ್ನು ಫ್ರೀಜರ್‌ನಲ್ಲಿಟ್ಟಿರುವುದಾಗಿ ತಿಳಿಸಿದ್ದಾಳೆ. ಬಳಿಕ ಆ ದೇಹದ ತುಂಡುಗಳನ್ನು ಪಾಲಿಥಾನ್‌ ಬ್ಯಾಗ್‌ಗಳಲ್ಲಿ ಪ್ಯಾಕ್‌ ಮಾಡಿ ಬಳಿಕ ಮೇಘಾಲಯಕ್ಕೆ ಸಾಗಿಸಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕೆಲಸಕ್ಕೆ ಈಕೆಗೆ ಪ್ರಿಯಕರ ಹಾಗೂ ಆತನ ಸ್ನೇಹಿತ ಕೂಡ ಸಹಾಯ ಮಾಡಿದ್ದಾರೆ. ಮೃತರನ್ನು ಅಮರೇಂದ್ರ ಡೇ ಮತ್ತು ಶಂಕರಿ ಡೇ ಎಂದು ಗುರುತಿಸಲಾಗಿದೆ. ಈ ಕೊಲೆ ಕಳೆದ ವರ್ಷ ಆಗಸ್ಟ್‌-ಸೆಪ್ಟೆಂಬರ್‌ನಲ್ಲಿ ನಡೆದಿದೆ. ಹತ್ಯೆಗೀಡಾದ ತಾಯಿಯ ದೇಹದ ಕೆಲವು ಭಾಗಗಳನ್ನು ಮೇಘಾಲಯದಿಂದ ವಶಪಡಿಸಿಕೊಳ್ಳಲಾಗಿದ್ದು, ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago