Latest

ಕೋಲಾರ್ ಎಸ್‌ಬಿಐ ಎಟಿಎಂ ದರೋಡೆ: ಕಳ್ಳರು ₹27 ಲಕ್ಷ ನಗದು ದೋಚಿ ಪರಾರಿ.!

ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ ದರೋಡೆ ಪ್ರಕರಣದಿಂದ ಶಾಕ್ ಆಗಿರುವಂತಾಗಿದೆ. ಗಲ್ ಪೇಟೆ ಪೊಲೀಸ್ ಠಾಣೆಗೆ ಹತ್ತಿರವಿರುವ ಈ ಎಟಿಎಂ ಯಂತ್ರದಿಂದ ಅಪರಿಚಿತ ಕಳ್ಳರು ಸುಮಾರು ₹27 ಲಕ್ಷ ಮೌಲ್ಯದ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ.

ಬೆಳಗ್ಗೆ ಬ್ಯಾಂಕ್ ಸಿಬ್ಬಂದಿ ಎಟಿಎಂ ಪರಿಶೀಲನೆ ವೇಳೆ ದರೋಡೆ ನಡೆದಿರುವುದು ಬೆಳಕಿಗೆ ಬಂದಿದೆ. ಕೂಡಲೇ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಹಾಗೂ ಬೆರಳಚ್ಚು ತಜ್ಞರೊಂದಿಗೆ ಶ್ವಾನದಳವನ್ನು ರವಾನಿಸಿ ಪರಿಶೀಲನೆ ಕೈಗೊಂಡಿದ್ದಾರೆ.

ಘಟನೆಯು ಹೆಚ್ಚುವರಿ ಭದ್ರತೆ ಇಲ್ಲದಿರುವ ಎಟಿಎಂ ಕೇಂದ್ರಗಳ ಮೇಲಿನ ಭದ್ರತಾ ಪ್ರಮಾಣವನ್ನೇ ಪ್ರಶ್ನೆಗೊಳಿಸಿದೆ. ಕಳ್ಳರು ಎಟಿಎಂ ಯಂತ್ರವನ್ನು ತಾಂತ್ರಿಕವಾಗಿ ತೆರೆದು ನಗದು ದೋಚಿರುವ ಶಂಕೆ ವ್ಯಕ್ತವಾಗಿದ್ದು, ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯಕ್ಕೆ ಪೊಲೀಸರು ಮುಂದಾಗಿದ್ದಾರೆ.

ಈ ಕುರಿತು ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚಲು ಕ್ರಮ ಜರುಗಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago