Latest

ಕೋಲಾರ ಸರಣಿ ಕಳ್ಳತನ ; ಇಬ್ಬರ ಬಂಧನ

ಕೋಲಾರ ನಗರ ಪೊಲೀಸರಿಂದ ರಾಜ್ಯದ ಹಲವಾರು ಕಡೆ ಅಂಗಡಿಗಳ ರೋಲಿಂಗ್ ಷಟರ್ ಹೊಡೆದು ಹಣ ಕಳ್ಳತನ ಮಾಡಿದ್ದ ಮತ್ತು ಹೆದ್ದಾರಿಗಳಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳ ಬಂಧನ.

ಕೋಲಾರ ನಗರದಲ್ಲಿ ಇತ್ತೀಚಿಗೆ ರೋಲಿಂಗ್ ಷಟರ್ ಹೊಡೆದು ಹಣ ಕಳ್ಳತನ ಮಾಡುತ್ತಾ ಸಾರ್ವಜನಿಕರ ಮತ್ತು ಪೊಲೀಸರ ನಿದ್ದೆಗೆಡಿಸಿದ್ದ ಆರೋಪಿಗಳನ್ನು ಬಂಧಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ನಿಖಿಲ್ ಬಿ. ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ರವಿಶಂಕರ್, ಹೆಚ್.ಸಿ. ಜಗದೀಶ್ ಮತ್ತು ಪೊಲೀಸ್ ಉಪಾಧೀಕ್ಷಕರು ಕೋಲಾರ ಉಪವಿಭಾಗ ಎಂ. ಹೆಚ್. ನಾಗ್ಲೆ ರವರ ಮಾರ್ಗದರ್ಶನದಲ್ಲಿ ಎರಡು ವಿಶೇಷ ತಂಡಗಳನ್ನು ರಚಿಸಲಾಗಿತ್ತು.

ಕೋಲಾರ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸದಾನಂದ, ಎಂ. ಹಾಗೂ ಪಿ.ಎಸ್.ಐ ಸೈಯದ್ ಖಾಸಿಂ, ಸಿಬ್ಬಂದಿಯವರಾದ ಮೋಹನ್, ನಾರಾಯಣಸ್ವಾಮಿ, ಮೆಹಬೂಬ್ ಪಾಷಾ, ಶ್ರೀನಾಥ, ಕಿಶೋರ, ಶಾ ಮೂರ್ತಿ, ಬಾಲಾಜಿ. ಹೆಚ್.ವಿ. ಗಂಗಾಧರ, ಜೀಪ್ ಚಾಲಕರಾದ ಮುರುಳಿ ಮತ್ತು ತಾಂತ್ರಿಕ ವಿಭಾಗದ ಸಿಬ್ಬಂದಿಯಾದ ಪಿ.ಸಿ ಮುರುಳಿ ರವರ ತಂಡವು ಹಲವಾರು ಸಿಸಿ ಕ್ಯಾಮರಗಳು ಹಾಗೂ ಆಧುನಿಕ ತಂತ್ರಜ್ಞಾನದ ಸಹಾಯದಿಂದ ಆರೋಪಿಗಳನ್ನು ರಾಯಚೂರು ಜಿಲ್ಲೆಯ ಸಿಂದನೂರು ಬಸ್ ನಿಲ್ದಾಣದ ಬಳಿ ವಶಕ್ಕೆ ಪಡೆದು ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಆಯುಧಗಳು, ಜರ್ಕಿನ್, ಮಂಕೀಕ್ಯಾಪ್ ಮತ್ತು ಕೃತ್ಯಕ್ಕೆ ಬಳಸಿದ್ದ 03 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈ ಪ್ರಕರಣಗಳಿಗೆ ಸಂಬಂದಿಸಿದಂತೆ ಪ್ರಮುಖ ಆರೋಪಿಗಳಾದ
ರೋಹಿತ್ ಗಿರಿ ಮತ್ತು ದಾದಾಪೀರ್ ಈ ಆರೋಪಿಗಳು ಕೋಲಾರ ನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಟೌನ್, ಪೆರೇಸಂದ್ರ, ಚಿಂತಾಮಣಿ ಟೌನ್, ತುಮಕೂರು ನಗರ, ನೆಲಮಂಗಲ, ದೇವನಹಳ್ಳಿ, ರಾಮನಗರ ಹಾಗೂ ರಾಜ್ಯದ ಇನ್ನೂ ಹಲವಾರು ಕಡೆ ರಾತ್ರಿ ವೇಳೆ ಅಂಗಡಿಗಳ ರೋಲಿಂಗ್ ಷಟರ್ ಹೊಡೆದು ಹಣ ಕಳವು ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ.

ಈ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿ ಮೆಚ್ಚುಗೆಯನ್ನು ವ್ಯಕ್ತಪಡಿಸಿ ತಂಡಕ್ಕೆ ಬಹುಮಾನವನ್ನು ಘೋಷಿಸಿದ್ದಾರೆ.

ವರದಿ: ರೋಶನ್ ಜಮೀರ್

nazeer ahamad

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

37 minutes ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

6 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

21 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago