ಬಾಗಲಕೋಟೆ: ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಬಾಗಲಕೋಟೆ ಮೂಲದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಮೂಳದಿಂದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಗ್ರಾಮದ ನಿವಾಸಿ ಪರಮಾನಂದ ಜೈನ್ ಎನ್ನುವ ಈ ಯುವಕ, ಕೊಲ್ಕತ್ತಾದ ಐಐಎಂ ಕಾನೂನು ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದು, ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದನು.
ಆರೋಪಗಳ ಪ್ರಕಾರ, ಯುವತಿಯೊಬ್ಬಳನ್ನು ಹಾಸ್ಟೆಲ್‌ಗೆ ಕರೆಯಿಸಿಕೊಂಡು, ಮದ್ಯಪಾನ ಸೇವಿಸಲು ಬಲವಂತ ಮಾಡಿದ ನಂತರ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತಂತೆ ದೂರಿನ ಆಧಾರದ ಮೇಲೆ, ಪೊಲೀಸರು ಪರಮಾನಂದನನ್ನು ಜುಲೈ 12ರಂದು ಬಂಧಿಸಿ ವಿಚಾರಣೆಗಾಗಿ ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಆದರೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಆರೋಪಿತ ಯುವಕನ ವಿರುದ್ಧ ಯುವತಿಯ ಕುಟುಂಬದವರು ಲೈಂಗಿಕ ದೌರ್ಜನ್ಯದ ಆರೋಪವನ್ನು ತಳ್ಳಿಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ಇನ್ನೂ ಮುಂದುವರೆದಿದ್ದು, ಸಾಕ್ಷ್ಯಾಧಾರಗಳ ಪುರಾವೆಗಳ ಆಧಾರದಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಕಾಲೇಜು ಮತ್ತು ಪೊಲೀಸ್ ಇಲಾಖೆ ಈ ಪ್ರಕರಣದ ಕುರಿತು ಅಧಿಕೃತ ಹೇಳಿಕೆಯನ್ನು ಇನ್ನೂ ನೀಡಿಲ್ಲ. ಘಟನೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ನಡುವೆಯೂ ಆತಂಕದ ವಾತಾವರಣ ಮೂಡಿದೆ.
ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…
ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…
ಹಾವೇರಿ: ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಕೆಲಸ ಮಾಡಿಕೊಡಲು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಅಧಿಕಾರಿಯೊಬ್ಬರು ಲೋಕಾಯುಕ್ತ…
ನವದೆಹಲಿ: ತನ್ನ ಪ್ರಿಯಕರ ಮತ್ತೊಬ್ಬ ಮಹಿಳೆಯೊಂದಿಗೆ ತೆರಳಿದ್ದಾನೆ ಎಂದು ಆರೋಪಿಸಿ ದೆಹಲಿ ಮೂಲದ ಖ್ಯಾತ ಬ್ಲಾಗರ್ ಶ್ವೇತಾ ದ್ವಿವೇದಿ ಸಾಮಾಜಿಕ…
ಬಳ್ಳಾರಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಿಜವಾದ ಜಮೀನು ಮಾಲೀಕರ ಹೆಸರನ್ನು ದುರುಪಯೋಗಪಡಿಸಿಕೊಂಡು ಸುಮಾರು ₹1.08 ಕೋಟಿ ಮೌಲ್ಯದ ಜಮೀನನ್ನು ವಂಚನೆಯಿಂದ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇದೀಗ ಮಹತ್ವದ ಹಂತ ತಲುಪಿದೆ. ಪ್ರಕರಣದಲ್ಲಿ 14ನೇ ಆರೋಪಿಯಾಗಿದ್ದ ಪ್ರದೋಷ್ ರಾವ್ ಮಾಫಿ…