Categories: CrimeLatest

ರಾಣೇಬೆನ್ನೂರು ಬಳಿ ಕೆಎಸ್‌ಆರ್‌ಟಿಸಿ ಬಸ್‌ಗೆ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ 17 ಪ್ರಯಾಣಿಕರು ಸುರಕ್ಷಿತ

ಹಾವೇರಿ: ಬೆಂಗಳೂರಿನಿಂದ ಗದಗದತ್ತ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಪಲ್ಲಕ್ಕಿ ಬಸ್ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಭೀಕರವಾಗಿ ಹೊತ್ತಿ ಉರಿದ ಘಟನೆ ನಡೆದಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ ಎಲ್ಲ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪ್ರಯಾಣದ ಮಧ್ಯೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿ ಗಂಭೀರವಾಗುತ್ತಿರುವುದನ್ನು ಗಮನಿಸಿದ ಚಾಲಕ ಪಕ್ಕೀರಪ್ಪ ತಕ್ಷಣವೇ ಬಸ್ ನಿಲ್ಲಿಸಿ, ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಬಳಿಕ ಅವರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರೂ, ಕೆಲವೇ ಕ್ಷಣಗಳಲ್ಲಿ ಬೆಂಕಿಯ ತೀವ್ರತೆ ಹೆಚ್ಚಾಗಿ ಇಡೀ ಬಸ್‌ನ್ನು ಆವರಿಸಿಕೊಂಡಿದೆ.

ನೋಡುತ್ತಲೇ ಪಲ್ಲಕ್ಕಿ ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ವಾಹನ ಸಂಪೂರ್ಣ ನಾಶವಾಗಿದೆ. ಘಟನೆ ಬಗ್ಗೆ ಮಾಹಿತಿ ದೊರಕುತ್ತಿದ್ದಂತೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಹೆದ್ದಾರಿಯಲ್ಲಿ ಉಂಟಾದ ಟ್ರಾಫಿಕ್‌ನ್ನು ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ.

ಬಸ್‌ಗೆ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ಭ್ರಷ್ಟರ ಬೇಟೆ

Recent Posts

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

10 minutes ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

8 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

23 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago