Latest

ರೂಪಾ-ರೋಹಿಣಿ ಜಗಳದಲ್ಲಿ ಕುಸುಮಾ ಎಂಟ್ರಿ!

ರೋಹಿಣಿ ಸಿಂಧೂರಿ(ಐಎಎಸ್‌) ಮತ್ತು ಡಿ. ರೂಪಾ(ಐಪಿಎಸ್‌) ನಡುವಿನ ಜಟಾಪಟಿಗೆ ಆತ್ಮಹತ್ಯೆ ಮಾಡಿಕೊಂಡ ಡಿ.ಕೆ. ರವಿ(ಐಎಎಸ್‌) ಅವರ ಪತ್ನಿ ಕುಸುಮಾ ಹನುಮಂತರಾಯಪ್ಪ ಎಂಟ್ರಿ ಕೊಟ್ಟಿದ್ದಾರೆ. ಸಿಂಧೂರಿರವರ ವಿರುದ್ಧ ರೂಪಾರವರು ೧೯ ಗಂಭೀರ ಆರೋಪಗಳನ್ನು ಮಾಡಿದ್ದು, ಅದರಲ್ಲಿ ಡಿ.ಕೆ. ರವಿ ಸಾವಿನ ವಿಚಾರ ಹಾಗೂ ಡಿ.ಕೆ. ರವಿ ಮತ್ತು ರೋಹಿಣಿ ಸಿಂಧೂರಿ ನಡುವೆ ಪ್ರೇಮ ಸಲ್ಲಾಪ ನಡೆಯುತ್ತಿತ್ತು ಎನ್ನುವುದೂ ಸೇರಿದಂತೆ ಇನ್ನು ಹಲವು ವಿಚಾರಗಳನ್ನು ಹೇಳಿದ್ದರು.
ಐಎಎಸ್‌ ಅಧಿಕಾರಿಯಾಗಿದ್ದ ಡಿ.ಕೆ. ರವಿ ಸಂಭಾವಿತ ವ್ಯಕ್ತಿ. ಸಿಬಿಐ ವರದಿಯಲ್ಲಿ ಡಿ.ಕೆ. ರವಿ ಮತ್ತು ರೋಹಿಣಿ ಸಿಂಧೂರಿರವರ ಚಾಟ್ಸ್ ಬಗ್ಗೆ ಉಲ್ಲೇಖ ಇದ್ದು, ರವಿ ಅವರು ಎಂದಾದರೂ ಲಿಮಿಟ್‌ ಕ್ರಾಸ್ ಮಾಡಿದ ತಕ್ಷಣವೇ ಅವರನ್ನು ಬ್ಲಾಕ್ ಮಾಡಬಹುದಿತ್ತು. ಪರ್ಮನೆಂಟ್ ಆಗಿ ಬ್ಲಾಕ್ ಮಾಡಲಿಲ್ಲ ಈಕೆ. ಬ್ಲಾಕ್ ಮಾಡದೆ ಇದ್ದದ್ದು ಉತ್ತೇಜನ ಕೊಡುವ ಹಾಗೆ ಎಂಬಂತೆಯೇ ಕಾಣುತ್ತದೆ ಎಂಬುದು ಅನೇಕರ ಅಭಿಪ್ರಾಯ.
ʻʻನನ್ನ ಪ್ರಶ್ನೆ ಇಷ್ಟೇ, ರೋಹಿಣಿ ಸಿಂಧೂರಿ ಯಾಕೆ ರವಿಯನ್ನು ಬ್ಲಾಕ್ ಮಾಡಲಿಲ್ಲ. ಅವರಿಬ್ಬರ ಪ್ರೇಮ ಸಲ್ಲಾಪ ಸಿಬಿಐ ಕೊಟ್ಟ ಫೈನಲ್ ರಿಪೋರ್ಟ್ ನಲ್ಲಿ ಎಲ್ಲರ ಕೈ ಸೇರಿದೆ. ಒಬ್ಬ ಪುರುಷ ಎಲ್ಲೆ ಮೀರಿ ನಡೆದಾಗ ಈಕೆ ಜವಾಬ್ದಾರಿಯುತ ಹೆಣ್ಣು ಮಗಳಾಗಿ ಯಾಕೆ ಬ್ಲಾಕ್ ಮಾಡಲಿಲ್ಲ? ಅಂದರೆ ಉತ್ತೇಜನ ಕೊಟ್ಟಂತೆ ಅಲ್ಲವೇ? ಅದೇ ರೀತಿ ಐಎಎಸ್ ಅಧಿಕಾರಿಗಳಿಗೆ ಕಳಿಸಿದ ಆ ರೀತಿಯ ಚಿತ್ರಗಳು ಉತ್ತೇಜನ ಕೊಡುವುದು ಎಂದು ಅರ್ಥ ಆಗುವುದಿಲ್ಲವೇ? ಈ ರೀತಿಯ ಚಿತ್ರಗಳನ್ನು ಯಾವ ಯಾವ ಅಧಿಕಾರಿಗೆ, ಯಾಕೆ ಕಳಿಸಿದರು, ಹಾಗೂ ಸೇವಾ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ಸ್ಪಷ್ಟೀಕರಣ ನೀಡಲಿʼʼ ಎಂದು ರೂಪಾ ಕೇಳಿದ್ದಾರೆ.
ಈ ಎಲ್ಲಾ ಆರೋಪಗಳ ಚರ್ಚೆಗಳನ್ನು ನೋಡುತ್ತಿದ್ದ ಡಿಕೆ ರವಿ ರವರ ಪತ್ನಿ ರಾಜರಾಜೇಶ್ವರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕುಸುಮರವರು ಈ ವಿಚಾರದ ಯಾವುದೇ ಉಲ್ಲೇಖವನ್ನು ಮಾಡದೆ ತಮ್ಮ ಟ್ವಿಟರ್ ಖಾತೆಯಲ್ಲಿ

“ Karma will get back at you , sooner or later it surely will ” ಕರ್ಮವು ತಮಗೆ ಹಿಂತಿರುಗುತ್ತದೆ, ಬೇಗ ಅಥವಾ ತಡವಾಗಿ, ಬರುವುದು ಖಚಿತ. ಎಂದು ಬರೆದಿದ್ದಾರೆ.

ಕುಸುಮಾ ರವರ ಟ್ವಿಟ್ಗೆ ಪ್ರತಿಕ್ರಿಯಿಸಿರುವ ರೂಪಾ ರವರು ಈ ರೀತಿ ಬರೆದುಕೊಂಡಿರುತ್ತಾರೆ.

“ಕುಸುಮಾ, ಒಬ್ಬ ಮಹಿಳೆಯಾಗಿ ನಿನ್ನ ನೋವು ನನಗೆ ಅರ್ಥವಾಗುತ್ತದೆ. ಮತ್ತು ಅನೇಕ ಇತರ ಮಹಿಳೆಯರ ನೋವು (ಅವರಲ್ಲಿ ಕೆಲವರು ಐಎಎಸ್‌ನಲ್ಲಿ), ಇನ್ನೂ ಅಸಹಾಯಕರಾಗಿದ್ದಾರೆ. ಆದರೆ ಅಂತಿಮವಾಗಿ, ಯಾರಾದರೂ ಅಪರಾಧಿಯ ವಿರುದ್ಧ ನಿಲ್ಲಬೇಕು (ಅವಳು ಮಹಿಳೆಯಾಗಿದ್ದರೂ ಸಹ). ಈ ವಿಷಯದಲ್ಲಿ ನಿಮ್ಮೊಂದಿಗೆ. ಮರುಕಳಿಸದಂತೆ ದೇವರು ಅವಳಿಗೆ ಸಹಾನುಭೂತಿ ಮತ್ತು ಸದ್ಬುದ್ಧಿಯನ್ನು ನೀಡಲಿ.”  ಎಂದು ಬರೆದಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago