ಬೆಳಗಾವಿ ಜಿಲ್ಲೆಯ ಕಿತ್ತೂರು ಬಳಿ ಸಂಭವಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳು ಕಾಲ ಪರಾರಿಯಾಗಿದ್ದ ಲಾರಿ ಚಾಲಕನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಅಪಘಾತದ ದಿನದಿಂದಲೇ ಕಣ್ಮರೆಯಾಗಿದ್ದ ಆರೋಪಿಯನ್ನು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರದಿಂದ ಪತ್ತೆ ಹಚ್ಚಲಾಗಿದೆ.
ಜನವರಿ 14ರಂದೇ ಬೆಳಗಿನ ಜಾವ ಅಪಘಾತ ಸಂಭವಿಸಿದ್ದು, ಬೆಂಗಳೂರಿನಿಂದ ಬೆಳಗಾವಿಗೆ ಬರುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರಿಗೆ ಕಿತ್ತೂರಿನ ಅಂಬಡಗಟ್ಟಿ ಬಳಿ ಲಾರಿ ನಿಂದ ಡಿಕ್ಕಿ ಹೊಡೆದು ಪರಾರಿಯಾಗಿದೆ. ಈ ಅಪಘಾತದಲ್ಲಿ ಸಚಿವೆಗೆ ಬೆನ್ನಿನ ಭಾಗದಲ್ಲಿ ಗಂಭೀರ ಗಾಯವಾಗಿತ್ತು. ಕಾರು ಚಾಲಕ ಶಿವಪ್ರಸಾದ್ ಕಿತ್ತೂರು ಠಾಣೆಯಲ್ಲಿ ನೀಡಿದ್ದ ದೂರಿನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿದ್ದ ಪೊಲೀಸರು, ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಸುಮಾರು 69 ಲಾರಿಗಳನ್ನು ಗಂಭೀರವಾಗಿ ಪರೀಕ್ಷಿಸಿದರು. ಸುಮಾರು 10 ಲಾರಿಗಳ ಬಣ್ಣದ ಮಾದರಿಗಳನ್ನು ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು, ಎಫ್‌ಎಸ್‌ಎಲ್ ವರದಿಯಲ್ಲಿ ಅಪಘಾತಕ್ಕೀಡಾದ ಲಾರಿಯ ಪತ್ತೆ ನಡೆದಿತು.
ಈ ಮಾಹಿತಿಗಳನ್ನೆಲ್ಲ ಆಧರಿಸಿ, ಪುಣೆ ಮೂಲದ ಮಧುಕರ ಸೋಮವಂಶಿ ಎಂಬ ವ್ಯಕ್ತಿಯ ಫೋನ್ ಕಾಲ್ ಡಿಟೇಲ್ಸ್‌ನಿಂದ ಗುರುತು ಹಿಡಿದು, ಇಂದಾಪುರ ಗ್ರಾಮದಿಂದ ಬಂಧನ ನಡೆಸಲಾಯಿತು. ವಿಚಾರಣೆ ವೇಳೆ ಆತ ಅಪಘಾತ ನಡೆಸಿದ್ದ ವಿಚಾರವನ್ನು ಒಪ್ಪಿಕೊಂಡಿದ್ದಾನೆ. ಆದರೆ ಪ್ರಸ್ತುತವಾಗಿ ಆರೋಪಿಯನ್ನು ಠಾಣಾ ಜಾಮೀನಿನಡಿ ಬಿಡುಗಡೆ ಮಾಡಲಾಗಿದೆ.
ಈ ಕುರಿತು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, “ಅಪಘಾತ ನಡೆದ ನಂತರ 3 ತಿಂಗಳ ಕಾಲ ಕಿತ್ತೂರು ಪೊಲೀಸರು ಶ್ರಮಪಟ್ಟು ತನಿಖೆ ನಡೆಸಿದ್ದು, ಅಂತಿಮವಾಗಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ಎಲ್ಲ ಕಾನೂನು ಪ್ರಕ್ರಿಯೆಗಳನ್ನು ಅನುಸರಿಸಿದ್ದೇವೆ. ಚಾರ್ಜ್‌ಶೀಟ್ ಸಿದ್ಧಪಡಿಸಿ ಶೀಘ್ರವೇ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು,” ಎಂದು ತಿಳಿಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…