ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇವಲ 14 ಎಕರೆ ಸರ್ಕಾರಿ ಭೂಮಿ ಒತ್ತುವರಿಯ ಆರೋಪಗಳು ಕೇಳಿಬಂದವು. ಈ ಆರೋಪಗಳ ಹಿನ್ನೆಲೆ, ಬಿಡದಿ ಹತ್ತಿರದ ಕೇತಗಾನಹಳ್ಳಿ ಪ್ರದೇಶದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಸರ್ವೇ ಕಾರ್ಯವನ್ನು ಹಮ್ಮಿಕೊಂಡರು.
ಹೆಚ್.ಡಿ. ಕುಮಾರಸ್ವಾಮಿ ಅವರು ಕೊನೆಗೂ 14 ಎಕರೆ ಸರ್ಕಾರಿ ಭೂಮಿಯನ್ನು ತಮ್ಮ ಆಕ್ರಮಣಕ್ಕೆ ಒಳಪಡಿಸಿದ್ದು ಎಂದು ಸಾಮಾಜಿಕ ಹೋರಾಟಗಾರರು ಆರೋಪಿಸಿದ್ದರು. ಈ ದೂರುನಂತರ, ಕಂದಾಯ ಇಲಾಖೆಗೆ ಹೈಕೋರ್ಟ್ ಸರ್ವೇ ನಡೆಸಲು ಆದೇಶ ಹೊರಡಿಸಿತ್ತು.
ಈ ಆದೇಶದಂತೆ, ರೆವಿನ್ಯೂ ಇನ್ಸ್‌ಪೆಕ್ಟರ್ ಪ್ರಕಾಶ್ ಹಾಗೂ ಗ್ರಾಮ ಆಡಳಿತಾಧಿಕಾರಿ ವಿಶಾಲಾಕ್ಷಿಯವರೊಂದಿಗೆ ಅಧಿಕಾರಿಗಳು ಸರ್ವೇ ಕಾರ್ಯವನ್ನು ಇಂದು ನಡೆಸಿದರು. ಸುಮಾರು 35ಕ್ಕೂ ಹೆಚ್ಚು ಸರ್ವೇ ನಂಬರನ್ನು ಪರಿಶೀಲನೆಗೆ ಒಳಪಡಿಸಲಾಗಿತ್ತು.
ಹೆಚ್.ಡಿ. ಕುಮಾರಸ್ವಾಮಿ ಅವರ ಸಹೋದರಿ ಅನುಸೂಯ ಮಂಜುನಾಥ್ ಹಾಗೂ ಸಂಬಂಧಿ ಡಿಸಿ ತಮ್ಮಣ್ಣ ಅವರ ಹೆಸರಿನಲ್ಲಿರುವ 110 ಎಕರೆ ಜಮೀನೂ ಈ ಸರ್ವೇಗೆ ಒಳಪಟ್ಟಿತ್ತು.
ಈ ಸರ್ವೇ ಕಾರ್ಯವು ಭೂಮಿಯ ಮಾಲಿಕತ್ವ ಹಾಗೂ ಸ್ವಾಧೀನ ಕುರಿತು ಸ್ಪಷ್ಟತೆ ನೀಡುವ ಉದ್ದೇಶವನ್ನು ಹೊತ್ತಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…