Categories: Latest

ಭೂದಾಖಲೆಗಳ ನಕಲು ಶುಲ್ಕ ಪರಿಷ್ಕರಣೆ: ಸರ್ಕಾರದಿಂದ ಹೊಸ ಏಕರೂಪದ ದರ ಜಾರಿ

ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ ಕಚೇರಿಗಳಲ್ಲಿ ಬೇರೆಬೇರೆ ದರ ವಸೂಲಿ ಮಾಡಲಾಗುತ್ತಿದ್ದು, ಇದರಿಂದ ಉಂಟಾಗುತ್ತಿದ್ದ ಗೊಂದಲ ನಿವಾರಣೆ ಹಾಗೂ ಏಕರೂಪದ ಶುಲ್ಕ ವ್ಯವಸ್ಥೆ ಜಾರಿಗೆ ತರುವ ಉದ್ದೇಶದಿಂದ ಹೊಸ ದರಪಟ್ಟಿಯನ್ನು ಸರ್ಕಾರ ಪ್ರಕಟಿಸಿದೆ.

ಹೊಸ ಆದೇಶದ ಪ್ರಕಾರ, ಟಿಪ್ಪಣಿ ಅಥವಾ ಅಟ್ಲಾಸ್ ನಕಲುಗಳಿಗೆ ಪ್ರತಿ ಸರ್ವೆ ಅಥವಾ ಹಿಸ್ಸಾ ನಂಬರಿಗೆ ₹35 ಶುಲ್ಕ ನಿಗದಿಪಡಿಸಲಾಗಿದೆ. ಆಕಾರಬಂದು ನಕಲುಗಳಿಗೆ ₹20 ಹಾಗೂ ಹದ್ದುಬಸ್ತು ಸ್ಕೆಚ್ ಅಥವಾ ಪಿ.ಟಿ ಶೀಟ್‌ಗಳಿಗೆ ₹35 ವಸೂಲಿ ಮಾಡಲಾಗುತ್ತದೆ.

ಇದಲ್ಲದೆ, ನಕಾಶೆಯಲ್ಲಿ ಗುರುತಿಸಲಾದ ಪ್ರತಿ ಸರ್ವೆ ನಂಬರಿನ ವಿವರದ ನಕಲಿಗೆ ₹10 ಶುಲ್ಕ ವಿಧಿಸಲಾಗುತ್ತದೆ. ನೋಟಿಸ್ ಕಾಪಿ, ಅರ್ಜಿ ನಕಲು, ಹೇಳಿಕೆ ಅಥವಾ ಮಹಜರು ಪ್ರತಿಗಳಂತಹ ದಾಖಲೆಗಳಿಗೆ ಪ್ರತಿ ಪುಟಕ್ಕೆ ₹10 ದರ ನಿಗದಿಯಾಗಿದೆ.

ಆದೇಶದ ನಕಲುಗಳಿಗೆ ಮೊದಲ 100 ಪದಗಳಿಗೆ ಅಥವಾ ಅದರ ಭಾಗಕ್ಕೆ ₹10 ಹಾಗೂ ನಂತರದ ಪ್ರತಿ 100 ಪದಗಳಿಗೆ ಹೆಚ್ಚುವರಿ ₹10 ಶುಲ್ಕ ವಿಧಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ನಗರಮಾಪನ ವಿಭಾಗದ ದಾಖಲೆಗಳಾದ ಪಿ.ಆರ್. ಕಾರ್ಡ್, ವಿಚಾರಣಾ ರಿಜಿಸ್ಟರ್ ಎಂಟ್ರಿ ಮತ್ತು ಫೀಲ್ಡ್ ಬುಕ್ ನಕಲುಗಳಿಗೆ ತಲಾ ₹30 ನಿಗದಿಪಡಿಸಲಾಗಿದೆ.

ಇನ್ನು ಗ್ರಾಮ ನಕಾಶೆ ಅಥವಾ ನಗರಮಾಪನ ಎಲ್.ಎ ನಕಾಶೆಯ ವಿಸ್ತೀರ್ಣವು 500 ಚದರ ಇಂಚು ಮೀರಿದರೆ, ನಿಗದಿತ ದರದ ದುಪ್ಪಟ್ಟು ಶುಲ್ಕ ವಸೂಲಿ ಮಾಡಲಾಗುತ್ತದೆ ಎಂಬ ವಿಶೇಷ ಸೂಚನೆಯನ್ನೂ ಇಲಾಖೆ ನೀಡಿದೆ.

ಈ ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬರುವಂತೆ ಭೂಮಾಪನ ಇಲಾಖೆಯ ಆಯುಕ್ತ ವೆಂಕಟ್ ರಾಜಾ ಅವರು ಮೇ 11, 2026ರಂದು ಆದೇಶ ಹೊರಡಿಸಿದ್ದಾರೆ. ಇಲಾಖೆಯ ಎಲ್ಲಾ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಈ ಆದೇಶವನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಲಾಗಿದೆ.

ಇದರಿಂದ ಇನ್ನು ಮುಂದೆ ಸಾರ್ವಜನಿಕರು ಭೂದಾಖಲೆಗಳ ನಕಲು ಪಡೆಯುವಾಗ ರಾಜ್ಯಾದ್ಯಂತ ಒಂದೇ ರೀತಿಯ ಪರಿಷ್ಕೃತ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಭ್ರಷ್ಟರ ಬೇಟೆ

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

23 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago