ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ನಡೆಸಿದ ದಾಳಿಯಲ್ಲಿ ಮತ್ತೊಂದು ಅಚ್ಚರಿಯ ಸಂಗತಿ ಬೆಳಕಿಗೆ ಬಂದಿದೆ. ಕೆಆರ್‌ಐಡಿಎಲ್ ಸಂಸ್ಥೆಯ ಸೂಪರಿಂಟೆಂಡೆಂಟ್ ಇಂಜಿನಿಯರ್ ಪ್ರವೀಣ್ ಶ್ರೀ ಹರಿ ಅವರ ನಿವಾಸ ಹಾಗೂ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಆಸ್ತಿ, ನಗದು, ಚಿನ್ನ ಹಾಗೂ ಬೇನಾಮಿ ಆಸ್ತಿಗಳ ದಾಖಲೆಗಳು ಪತ್ತೆಯಾಗಿವೆ ಎನ್ನಲಾಗಿದೆ.
ದಾಳಿಯ ವೇಳೆ ಅಧಿಕಾರಿಗಳು ವಶಪಡಿಸಿಕೊಂಡ ದಾಖಲೆಗಳು ಮತ್ತು ಆಸ್ತಿಯ ಪ್ರಮಾಣ ತನಿಖಾಧಿಕಾರಿಗಳನ್ನೇ ಅಚ್ಚರಿಗೆ ದೂಡಿದೆ. ಆದಾಯಕ್ಕೆ ಮೀರಿದ ಆಸ್ತಿ ಹೊಂದಿರುವ ಶಂಕೆಯ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಪತ್ತೆಯಾದ ಆಸ್ತಿಗಳ ಮೌಲ್ಯದ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇದರ ನಡುವೆ ಪ್ರವೀಣ್ ಶ್ರೀ ಹರಿ ಅವರು ಇತ್ತೀಚೆಗೆ ನಿರ್ಮಿಸಿದ್ದ ಐಷಾರಾಮಿ ಫಾರಂಹೌಸ್ ಕೂಡ ತನಿಖೆಯ ಕೇಂದ್ರಬಿಂದುವಾಗಿದೆ. ವಾರಾಂತ್ಯಗಳಲ್ಲಿ ಇಲ್ಲಿ ಭರ್ಜರಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿತ್ತು ಎಂಬ ಮಾಹಿತಿಯೂ ಕೇಳಿಬಂದಿದ್ದು, ತನಿಖೆಯ ಭಾಗವಾಗಿ ಸಂಬಂಧಿತ ಆಸ್ತಿಗಳನ್ನು ಅಧಿಕಾರಿಗಳು ಪರಿಶೀಲನೆಗೆ ಒಳಪಡಿಸಿದ್ದಾರೆ. ಪ್ರಕರಣದ ಕುರಿತು ಲೋಕಾಯುಕ್ತ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…