ಕಾರವಾರ: ರಾಜ್ಯ ಸರ್ಕಾರವು ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದು, ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಸಚಿವ ಲಕ್ಷ್ಮಣ ಸವದಿ ಅವರನ್ನು ನಿಯೋಜಿಸಿದೆ. ಜಿಲ್ಲೆಯ ಆಡಳಿತಾತ್ಮಕ ಜವಾಬ್ದಾರಿಯನ್ನು ಅವರಿಗೆ ವಹಿಸಿರುವ ಸರ್ಕಾರದ ನಿರ್ಧಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಈ ಬಾರಿ ನಡೆದ ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಾವುದೇ ಶಾಸಕರಿಗೂ ಸಚಿವ ಸ್ಥಾನ ದೊರೆಯದಿರುವುದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಅಸಮಾಧಾನ ಮೂಡಿಸಿದೆ. ಜಿಲ್ಲೆಯ ಐವರು ಕಾಂಗ್ರೆಸ್ ಶಾಸಕರಿದ್ದರೂ ಸಚಿವ ಸಂಪುಟದಲ್ಲಿ ಜಿಲ್ಲೆಯ ಪ್ರತಿನಿಧಿತ್ವ ಸಿಗದಿರುವುದು ಗಮನಾರ್ಹವಾಗಿದೆ.
ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಗಳಲ್ಲಿ ಮಾಜಿ ಸಚಿವ ಹಾಗೂ ಭಟ್ಕಳ ಶಾಸಕ ಮಂಕಾಳ ವೈದ್ಯ ಅವರ ಹೆಸರು ಕೊನೆಯ ಕ್ಷಣದವರೆಗೂ ಕೇಳಿಬಂದಿತ್ತು. ಆದರೆ ಅಂತಿಮವಾಗಿ ಅವರಿಗೆ ಅವಕಾಶ ದೊರೆಯದೇ, ದಾವಣಗೆರೆಯ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.
ಇದರ ನಡುವೆ ರಾಜ್ಯದ ಹಲವು ಭಾಗಗಳಲ್ಲಿ ಅತಿವೃಷ್ಟಿ ಹಾಗೂ ಮಳೆಯ ಕೊರತೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಪರಿಶೀಲಿಸಲು ಸರ್ಕಾರ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿದೆ. ಅದರಂತೆ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿಯನ್ನು ಲಕ್ಷ್ಮಣ ಸವದಿ ಅವರಿಗೆ ವಹಿಸಲಾಗಿದೆ.
ಉಸ್ತುವಾರಿ ಸಚಿವರು ಶೀಘ್ರದಲ್ಲೇ ಜಿಲ್ಲೆಗೆ ಭೇಟಿ ನೀಡಿ, ಪ್ರತಿ ತಾಲೂಕಿನ ಮಳೆ ಪ್ರಮಾಣ, ಬೆಳೆ ಹಾನಿ, ಕುಡಿಯುವ ನೀರಿನ ಲಭ್ಯತೆ, ಕೃಷಿ ಚಟುವಟಿಕೆಗಳು ಹಾಗೂ ಅತಿವೃಷ್ಟಿ ಮತ್ತು ಬರ ಪರಿಸ್ಥಿತಿಯನ್ನು ಸ್ಥಳದಲ್ಲೇ ಪರಿಶೀಲಿಸಲಿದ್ದಾರೆ. ಬಳಿಕ ಸಮಗ್ರ ವರದಿಯನ್ನು ಸಿದ್ಧಪಡಿಸಿ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ.
ರಾಜ್ಯದ ಕೆಲವು ಜಿಲ್ಲೆಗಳು ಭಾರೀ ಮಳೆಯಿಂದ ಪ್ರವಾಹ ಹಾಗೂ ಬೆಳೆ ಹಾನಿಯನ್ನು ಎದುರಿಸುತ್ತಿದ್ದರೆ, ಇನ್ನೂ ಕೆಲವು ಜಿಲ್ಲೆಗಳು ಮಳೆಯ ಕೊರತೆಯಿಂದ ಬರದ ಆತಂಕದಲ್ಲಿವೆ. ಈ ಹಿನ್ನೆಲೆಯಲ್ಲಿ ಸಚಿವರಿಂದ ಪಡೆಯುವ ಜಿಲ್ಲಾವಾರು ವರದಿಯ ಆಧಾರದ ಮೇಲೆ ಪರಿಹಾರ ಕ್ರಮಗಳು, ರೈತರಿಗೆ ನೆರವು ಹಾಗೂ ಅಗತ್ಯ ಅಭಿವೃದ್ಧಿ ಯೋಜನೆಗಳನ್ನು ಸರ್ಕಾರ ಕೈಗೊಳ್ಳುವ ನಿರೀಕ್ಷೆಯಿದೆ.
ಸಚಿವ ಸಂಪುಟದಲ್ಲಿ ಉತ್ತರ ಕನ್ನಡಕ್ಕೆ ಸ್ಥಾನ ದೊರೆಯದ ನಿರಾಸೆಯ ನಡುವೆಯೇ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಲಕ್ಷ್ಮಣ ಸವದಿ ನೇಮಕಗೊಂಡಿರುವುದು ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಜಿಲ್ಲೆಯ ಸಮಸ್ಯೆಗಳ ಪರಿಹಾರ ಹಾಗೂ ಅಭಿವೃದ್ಧಿಗೆ ಅವರು ಯಾವ ರೀತಿಯ ಆದ್ಯತೆ ನೀಡಲಿದ್ದಾರೆ ಎಂಬುದರತ್ತ ಇದೀಗ ಜಿಲ್ಲೆಯ ಜನರ ಗಮನ ನೆಟ್ಟಿದೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…