ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ತೂಗುದೀಪ ಅವರ ಜಾಮೀನು ರದ್ದಾಗುವ ಸಾಧ್ಯತೆಗಳು ಚರ್ಚೆಗೆ ಬಂದಿರುವ ನಡುವೆ, ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಇದೀಗ ಭಾರೀ ಗದ್ದಲ ಸೃಷ್ಟಿಸಿದೆ.
ರಮ್ಯಾ, ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕೆಂದು ಟ್ವೀಟ್ ಮಾಡುತ್ತಿದ್ದಂತೆಯೇ, ದರ್ಶನ್ ಅಭಿಮಾನಿಗಳಿಂದ ಅವಳಿಗೆ ನಿಂದನೆ ಹಾಗೂ ಅಪಮಾನಕಾರಿ ಸಂದೇಶಗಳ ಮಳೆಯೇ ಸುರಿಯಿತು. ‘ಅಮ್ಮ’, ‘ಅಕ್ಕ’ ಎನ್ನುವ ಪದಬಳಕೆಗಳ ಮೂಲಕ ಪರ್ಸನಲ್ ಟಿಕೆಟ್ ತೆಗೆದುಕೊಂಡ ಅಭಿಮಾನಿಗಳ ವಿಡಂಬನೆಗೆ ತುತ್ತಾದ ರಮ್ಯಾ, ತಾನು ಪಡೆದ ಹಲವಾರು ಮೆಸೇಜ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡು, “ನಾನು ಕೇಳಿದಂತಷ್ಟೆ, ರೇಣುಕಾಸ್ವಾಮಿ ಮತ್ತು ನನ್ನ ನಡುವೆನಾದರೂ ವ್ಯತ್ಯಾಸವಿದೆಯೆ?” ಎಂದು ಪ್ರಶ್ನಿಸಿದರು.
ಇದೇ ಸಂದರ್ಭದಲ್ಲಿ, ನಟಿ ರಕ್ಷಿತಾ ಪ್ರೇಮ್ ಕೂಡ ಈ ವಿಚಾರದ ಹಿನ್ನೆಲೆಯಲ್ಲಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ, ನಾನು ಏನನ್ನು ವೈರಲ್ ಆಗುವುದನ್ನು ನೋಡಲು ಇಚ್ಛಿಸುತ್ತೇನೆ ಗೊತ್ತಾ? ಕನಿಷ್ಟ ಮಾನವೀಯತೆʼ ಎಂಬ ಸಂದೇಶವಿರುವ ಸ್ಟೋರಿಯನ್ನು ಪೋಸ್ಟ್ ಮಾಡಿದ್ದು, ಅದು ಈಗ ಮತ್ತೊಂದು ಚರ್ಚೆಗೆ ತುತ್ತಾಗಿದೆ.
ಈ ಸ್ಟೋರಿ ರಮ್ಯಾಗೆ ನೀಡಿದ ಟಾಂಗ್ ಎಂದು ದರ್ಶನ್ ಅಭಿಮಾನಿಗಳು ಹೇಳಿಕೆ ನೀಡುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ಅಭಿಪ್ರಾಯಗಳು ಹರಿದುಬರುತ್ತಿವೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…