Latest

ಭೂಗತಲೋಕದಿಂದ ಜೀವ ಬೆದರಿಕೆ ಕರೆ – ಸ್ಪೀಕರ್ ಯು.ಟಿ. ಖಾದರ್ ಭಾವನಾತ್ಮಕ ಪ್ರತಿಕ್ರಿಯೆ

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರಿಗೆ ಭೂಗತಲೋಕ ಪಾತಕಿಗಳಿಂದ ಜೀವ ಬೆದರಿಕೆ ಕರೆಗಳು ಬಂದಿರುವ ವಿಷಯ ಭಾನುವಾರದಂದು ಸುದ್ದಿಗೋಷ್ಠಿಯಲ್ಲಿ ಬಹಿರಂಗವಾಯಿತು. ಈ ಕುರಿತು ಮಾತನಾಡಿದ ಖಾದರ್, ಇಂತಹ ಬೆದರಿಕೆ ಕರೆಗಳು ಮೊದಲು ಕೂಡ ಹಲವಾರು ಬಾರಿ ಬಂದಿದ್ದನ್ನು ನೆನೆದರು.

“ನಮ್ಮ ಜನ್ಮ ಮತ್ತು ಮರಣದ ಬಗ್ಗೆ ತೀರ್ಮಾನ ಮಾಡುವ ಶಕ್ತಿ ದೇವರಿಗಿದೆ. ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ — ನನಗೆ ಶಾಂತಿಯುತ ಮರಣ ಸಿಕ್ಕಲಿ. ಎಲ್ಲವೂ ದೇವರ ಲೀಲೆಯೇ, ನಮ್ಮ ಕೈಯಲ್ಲಿ ಏನೂ ಇಲ್ಲ,” ಎಂದು ಭಾವೋದ್ರಿಕ್ತವಾಗಿ ಪ್ರತಿಕ್ರಿಯಿಸಿದ ಖಾದರ್, ತಮ್ಮ ಭವಿಷ್ಯದ ಬಗ್ಗೆ ಅನಿಶ್ಚಿತತೆಯನ್ನೂ ವ್ಯಕ್ತಪಡಿಸಿದರು.

“ಈಗ ನಿಮ್ಮ ಮುಂದೆ ನಿಂತು ಮಾತಾಡುತ್ತಿದ್ದೇನೆ. ಆದರೆ ಇದೇಕ್ಷಣದಿಂದ ನಾನು ಮತ್ತೆ ಮನೆಗೆ ಜೀವಂತವಾಗಿ ವಾಪಸ್ ಹೋಗುತ್ತೀನೆ ಎಂಬ ಭರವಸೆ ನನಗೆ ಇಲ್ಲ,” ಎಂದರು. ಈ ಮಾತುಗಳು ಅವರ ಭೀತಿಯ ತೀವ್ರತೆಯನ್ನು ತೋರಿಸುತ್ತವೆ.

ಜೀವ ಬೆದರಿಕೆಯ ಹಿನ್ನೆಲೆಯಲ್ಲಿ ತಮ್ಮ ಗೃಹ ಜಿಲ್ಲೆಯಲ್ಲಿ ಎನ್‌ಐಎ ಯನ್ನು ಸ್ಥಾಪಿಸುವ ಕುರಿತು ಮಾತನಾಡಿದ ಅವರು, “ನನ್ನ ರಕ್ಷಣೆಗೆಂದು ಅದರ ಅಗತ್ಯವಿಲ್ಲ. ಆದರೆ ಇದು ಜಿಲ್ಲೆಯ ಜನರ ಹಿತದೃಷ್ಟಿಯಿಂದ ಅಗತ್ಯವಿದ್ದರೆ, ಸರ್ಕಾರ ಎಚ್ಚರಿಕೆಯಿಂದ ಕ್ರಮ ಕೈಗೊಳ್ಳಬಹುದು,” ಎಂದು ಹೇಳಿದರು.

ಸ್ಪೀಕರ್ ಖಾದರ್ ಅವರ ಈ ಬಯಾನದಿಂದ, ಭೂಗತಲೋಕದ ಬೆದರಿಕೆಗಳು ರಾಜಕೀಯ ನಾಯಕರ ಭದ್ರತೆಗೆ ಎಂತಹ ಆತಂಕ ಸೃಷ್ಟಿಸುತ್ತವೆ ಎಂಬ ವಿಚಾರ ಮತ್ತೊಮ್ಮೆ ಚರ್ಚೆಗೆ ಎಳೆದಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

16 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago