ಮೈಸೂರು ತಾಲೂಕಿನ ಭುಗತಗಳ್ಳಿ ಗ್ರಾಮದಲ್ಲಿ ನಡತೆ ಶಂಕೆಯಿಂದ ನಡೆದಿರುವ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಸಿದ್ದರಾಜು (64) ಎಂಬಾತ ತನ್ನೊಂದಿಗೆ ಸಹಜೀವನ ನಡೆಸುತ್ತಿದ್ದ ದೂರದ ಸಂಬಂಧಿ ಜ್ಯೋತಿ (40) ಅವರನ್ನು ಕೊಲೆಗೈದು ಪರಾರಿಯಾಗಿದ್ದಾನೆ.
ಮಾಹಿತಿಯ ಪ್ರಕಾರ, ಸಿದ್ದರಾಜು ಮತ್ತು ಜ್ಯೋತಿ ಒಂದು ವಾರದ ಹಿಂದಷ್ಟೇ ಭುಗತಗಳ್ಳಿ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸಕ್ಕೆ ಬಂದಿದ್ದರು. ಈ ವೇಳೆ ಜ್ಯೋತಿಯ ನಡತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಸಿದ್ದರಾಜು, ಇಬ್ಬರ ನಡುವೆ ಉಂಟಾದ ವಾಗ್ವಾದದ ವೇಳೆ ಆಕೆಯನ್ನು ಹತ್ಯೆಗೈದು ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಘಟನೆಯ ಬಳಿಕ ಹಲವು ದಿನಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿ, ಕೃತ್ಯದ ಬಗ್ಗೆ ಪಶ್ಚಾತ್ತಾಪಗೊಂಡು ಐದಾರು ದಿನಗಳ ನಂತರ ಸ್ವತಃ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…