Latest

ಯೂನಿಯನ್ ಬ್ಯಾಂಕ್ ಸಿಬ್ಬಂದಿಯಿಂದ ಸಾಲದ ಕಿರುಕುಳ: ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ರೈತರೊಬ್ಬರು ಸಾಲಭಾದೆಗೆ ತುತ್ತಾಗಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮಂಜಾನಾಯ್ಕ್ (45) ಎಂಬವರು ಆತ್ಮಹತ್ಯೆಗೆ ಶರಣಾಗಿರುವ ರೈತರಾಗಿದ್ದಾರೆ.

ಬ್ಯಾಂಕ್ ಸಿಬ್ಬಂದಿಯ ಮೇಲಿನ ಕಿರುಕುಳದ ಆರೋಪ

ಮಂಜಾನಾಯ್ಕ್ ಅವರು ಯೂನಿಯನ್ ಬ್ಯಾಂಕಿನಿಂದ ₹4.70 ಲಕ್ಷದ ಸಾಲ ಪಡೆದಿದ್ದರು. ಹಣ ತೀರಿಸಲು ಕಠಿಣ ಒತ್ತಡ ಎದುರಾದ ಅವರು ಬ್ಯಾಂಕಿನ ವ್ಯವಸ್ಥಾಪಕ ಕಿರಣ್ ಹಾಗೂ ಗುಮಾಸ್ತ ಪಿರೋಜಿ ಅವರಿಂದ ನಿರಂತರ ಕಿರುಕುಳ ಅನುಭವಿಸಿದ್ದರೆಂದು ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆರೋಪಿಸಿದ್ದಾರೆ.

ಬ್ಯಾಂಕಿನವರು ಮಂಜಾನಾಯ್ಕ್ ಅವರಿಗೆ ಲಾಯರ್ ನೋಟೀಸ್ ಕಳುಹಿಸುವ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಅವಮಾನಿಸುತ್ತಿದ್ದರು. ಈ ನಿರಂತರ ಮಾನಸಿಕ ಒತ್ತಡಕ್ಕೆ ತತ್ತರಿಸಿದ ಅವರು ಶಿವಮೊಗ್ಗದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ಕೂಡಲೇ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರ ಮೃತ್ಯು ಸಂಭವಿಸಿದೆ.

ಗ್ರಾಮಸ್ಥರಿಂದ ತೀವ್ರ ಪ್ರತಿಭಟನೆ

ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಹುಣಸಘಟ್ಟ ಗ್ರಾಮಸ್ಥರು, ಆತ್ಮಹತ್ಯೆ ಮಾಡಿದ ರೈತನ ಶವವನ್ನು ಯೂನಿಯನ್ ಬ್ಯಾಂಕ್ ಎದುರು ಇಟ್ಟು ಪ್ರತಿಭಟನೆ ನಡೆಸಿದರು. ಪೊಲೀಸರ ಮಧ್ಯಸ್ಥಿಕೆಯಿಂದ ಪ್ರತಿಭಟನೆ ಶಾಂತಿಯುತವಾಗಿ ಅಂತ್ಯಗೊಂಡಿತು. ಆದರೆ ಗ್ರಾಮಸ್ಥರು ಹಾಗೂ ರೈತ ಸಂಘಟನೆಗಳು ಬ್ಯಾಂಕ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿವೆ.

ಪೊಲೀಸರು ತನಿಖೆ ಆರಂಭಿಸಿದ್ರು

ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ರೈತರ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ತನಿಖೆ ಪ್ರಾರಂಭಿಸಲಾಗಿದೆ. ಈ ಮಧ್ಯೆ, ಬ್ಯಾಂಕ್ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜನರು ಆಗ್ರಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಈ ಪ್ರಕರಣ ಮತ್ತಷ್ಟು ಗಂಭೀರ ತಿರುವು ಪಡೆಯುವ ಸಾಧ್ಯತೆಯಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

22 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago