Latest

ಲಂಚ ಸ್ವೀಕರಿಸುತ್ತಿದ್ದ ಪುರಸಭಾ ಸದಸ್ಯ ಲೋಕಾಯುಕ್ತ ವಶಕ್ಕೆ

ತರೀಕೆರೆ ಪಟ್ಟಣದಲ್ಲಿ ಪುರಸಭೆಯ ಪರವಾನಗಿ ನೀಡುವಲ್ಲಿ ಲಂಚವಹಿಸುತ್ತಿದ್ದ ಪುರಸಭಾ ಸದಸ್ಯ ಟಿ.ಎಂ. ರಂಗನಾಥ್ ಅವರನ್ನು ಲೋಕಾಯುಕ್ತ ಪೊಲೀಸರು ಬಲೆ ಹಾಕಿ ಬಂಧಿಸಿದ್ದಾರೆ.

ಪಟ್ಟಣದ ಬಿ.ಎಚ್. ರಸ್ತೆಯಲ್ಲಿರುವ ನವೀನ್ ಟೈಲ್ಸ್ ಮತ್ತು ಗ್ರಾನೆಟ್ ಮಳಿಗೆಗೆ ಪುರಸಭೆಯಿಂದ ಅನುಮತಿ ಪಡೆಯಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರ ಭಾಗವಾಗಿ, ಮೊದಲ ಕಂತಾಗಿ ₹50 ಸಾವಿರ ಪಡೆಯುತ್ತಿದ್ದ ಸಂದರ್ಭದಲ್ಲೇ ಅವರನ್ನು ಬಂಧಿಸಲಾಗಿದೆ.

ಈ ಸಂಬಂಧ ಪುರಸಭೆ ಮಾಜಿ ಅಧ್ಯಕ್ಷ ಟಿ.ಕೆ. ರಮೇಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ಆಧಾರದ ಮೇಲೆ ಕಾರ್ಯಾಚರಣೆ ರೂಪಿಸಲಾಗಿತ್ತು. ಚಿಕ್ಕಮಗಳೂರು ಲೋಕಾಯುಕ್ತ ಡಿವೈಎಸ್‌ಪಿ ಜೆ. ತಿರುಮಲೇಶ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ಕಾರ್ಯಾಚರಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಸಿ. ಲೋಕೇಶ್, ವಿಜಯಭಾಸ್ಕರ್ ಹಾಗೂ ಕಾನ್‌ಸ್ಟೆಬಲ್‌ಗಳಾದ ರವಿಚಂದ್ರ, ಮಲ್ಲಿಕಾರ್ಜುನ್, ಚಂದನ್ ಕುಮಾರ್, ಪ್ರಸಾದ್ ಎಂ. ಚಂದ್ರಶೆಟ್ಟಿ, ಮಜೀಬ್ ಖಾನ್ ಮತ್ತು ಶ್ರೀಧರ್ ಅವರು ಭಾಗವಹಿಸಿದ್ದರು.

ಈ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪುರಸಭೆಯಲ್ಲಿನ ಆಡಳಿತ ಕ್ರಮಗಳ ಮೇಲೂ ಸಾರ್ವಜನಿಕರಿಂದ ಪ್ರಶ್ನೆಗಳು ಮೂಡುತ್ತಿವೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

2 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

2 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

2 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

3 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

3 hours ago