Latest

₹4,000 ಲಂಚ ಪಡೆಯುವಾಗ ಸರ್ವೆಯರ್ ಅಶೋಕ್ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರವಾನಗಿ ಪಡೆದ ಸರ್ವೆಯರ್ ಹಾಗೂ ಜಿಲ್ಲಾ ಪಂಚಾಯತ್ ಕೆಡಿಪಿ ನಾಮನಿರ್ದೇಶಿತ ಸದಸ್ಯ ಅಶೋಕ್ ಅವರನ್ನು ಲಂಚ ಪಡೆಯುವ ಸಂದರ್ಭ ಲೋಕಾಯುಕ್ತ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣ ಸಂಬಂಧ ಹುಲ್ಲೆಹಳ್ಳಿ ವೆಂಕಟೇಶ್ ಎಂಬವರು ನೀಡಿದ ಖಚಿತ ದೂರಿನ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ.

ವೆಂಕಟೇಶ್ ಅವರ ಕಡೂರು ತಾಲೂಕಿನ ಹುಲ್ಲೆಹಳ್ಳಿ ಗ್ರಾಮದ ಜಮೀನಿನ ಹಳೆಯ ನಕ್ಷೆ ಸರಿಯಾಗಿರಲಿಲ್ಲ. ಇದನ್ನು ಸರಿಪಡಿಸಲು ಮತ್ತು ಹೊಸ ನಕ್ಷೆ ತಯಾರಿಸಲು ಅವರು ಕಡೂರು ಉಪ ವಿಭಾಗದ ಎಡಿಎಲ್‌ಆರ್‌ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕ್ರಿಯೆಯ ಸಂದರ್ಭದಲ್ಲಿ ಸರ್ವೆಯರ್ ಅಶೋಕ್, ವೆಂಕಟೇಶ್ ಅವರ ಸಹೋದರನಿಂದ ಮೊದಲು ₹1,200 ಪಡೆದು, ಮುಂದಿನ ಹಂತದಲ್ಲಿ ಕಡತ ತಯಾರಿಸಲು ₹5,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ರಕಂ ಕಡಿಮೆ ಮಾಡಿಸುವ ಪ್ರಯತ್ನದ ನಂತರ, ಕೊನೆಗೆ ₹4,000 ನೀಡಲು ಒಪ್ಪಿಕೊಂಡಿದ್ದರು.

ಸೋಮವಾರ ಸಂಜೆ, ಸರ್ವೆ ಇಲಾಖೆಯ ಕಚೇರಿಯಲ್ಲಿ ವೆಂಕಟೇಶ್ ಅವರಿಂದ ₹4,000 ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಅಶೋಕ್ ಬಂಧಿತನಾದರು. ಈ ಕಾರ್ಯಾಚರಣೆಯನ್ನು ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ಮತ್ತು ಇನ್‌ಸ್ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ನಡೆಸಲಾಯಿತು. ತಂಡದಲ್ಲಿ ಮಲ್ಲಿಕಾರ್ಜುನ್, ಚಂದ್ರಶೇಖರ್, ಮಹೇಶ್, ವೇದಾವತಿ, ಪ್ರಸಾದ್, ಚಂದ್ರಶೆಟ್ಟಿ ಮತ್ತು ಮುಜೀಬ್ ಸೇರಿದಂತೆ ಹಲವಾರು ಅಧಿಕಾರಿಗಳು ಭಾಗವಹಿಸಿದ್ದರು.

ಈ ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರೆಯುತ್ತಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago