ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ ನಕಾಶೆಯನ್ನು ಆನ್‌ಲೈನ್‌ನಲ್ಲಿ ಅಪ್ಲೋಡ್ ಮಾಡಲು ಹಣ ಬೇಡಿಕೆ ಇಟ್ಟಿದ್ದ ಆರೋಪದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲಾಡಳಿತ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಸ್‌ಡಿಎ ಅರವಿಂದ ಪವಾರ್ ಹಾಗೂ ಕಂಪ್ಯೂಟರ್ ಆಪರೇಟರ್ ಅಯ್ಯಬ್ ತೊಣಸ್ಯಾಳ, ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು. ಖಾತೆ ಸಂಬಂಧಿತ ಪ್ರಕ್ರಿಯೆಗಾಗಿ ₹15,000 ನಗದು ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ.
ಈ ಕಾರ್ಯಾಚರಣೆಯ ನಂತರ ಇಬ್ಬರನ್ನು ವಶಕ್ಕೆ ಪಡೆದುಕೊಂಡು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ. ಈ ಘಟನೆ ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರದ ಮತ್ತೊಂದು ಉದಾಹರಣೆಯಾಗಿ ಹೊರಹೊಮ್ಮಿದೆ.
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…