Latest

ವಡಗೇರಾ ತಹಶೀಲ್ದಾರ್ ಕಚೇರಿಯಲ್ಲಿ 50 ಸಾವಿರ ಲಂಚ ಸ್ವೀಕರಿಸಿದ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ವಡಗೇರಾ (ಯಾದಗಿರಿ ಜಿಲ್ಲೆ): ಭೂ ವಿವಾದದ ಪ್ರಕರಣದಲ್ಲಿ ಪರಿಹಾರ ನೀಡುವ ಹೆಸರಿನಲ್ಲಿ 50 ಸಾವಿರ ರೂ. ಲಂಚ ಪಡೆಯುತ್ತಿದ್ದ ಕೇಸ್ ವರ್ಕರ್ ಒಬ್ಬನು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಶುಕ್ರವಾರ ಸಂಜೆ ನಗರದಲ್ಲಿ ನಡೆದಿದೆ.

ವಡಗೇರಾ ತಹಶೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರವೀಣಕುಮಾರ ಎಂಬುವವರು, ಭೂ ವ್ಯಾಜ್ಯಕ್ಕೆ ಸಂಬಂಧಪಟ್ಟಂತೆ ಬಾಕಿಯಿದ್ದ ಪ್ರಕರಣವೊಂದನ್ನು ವಿಲೇವಾರಿ ಮಾಡಿಕೊಡುವ ನೆಪದಲ್ಲಿ ದೂರುದಾರ ಮಹ್ಮದ್ ಸಲಿಂ ಮುಲ್ಲಾದವರಿಂದ ಲಂಚ ಬೇಡಿದ್ದರು. ಈ ಸಂಬಂಧ ನೀಡಲಾದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪಥಕ ರೂಪಿಸಿ ದಾಳಿ ನಡೆಸಿದರು.

ಸ್ನೇಹಪೂರ್ಣವಾಗಿ ಹಣ ಸ್ವೀಕರಿಸುತ್ತಿದ್ದ ವೇಳೆ ದಾಳಿ ಮಾಡಿದ ಅಧಿಕಾರಿಗಳು, ಪ್ರವೀಣಕುಮಾರರನ್ನು ಲಂಚದ ಹಣದೊಂದಿಗೆ ರೆಡ್ ಹ್ಯಾಂಡ್ ಹಿಡಿದಿದ್ದಾರೆ. ಯಾದಗಿರಿ ಲೋಕಾಯುಕ್ತ ಎಸ್.ಪಿ ಉಮೇಶ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಜೆ.ಎಚ್ ಇನಾಂದಾರ್, ಪಿಎಸ್‌ಐ ಸಿದ್ದರಾಯ ಬಳೂರ್ಗಿ ಹಾಗೂ ತಂಡದ ಇತರ ಸದಸ್ಯರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ.

nazeer ahamad

Recent Posts

ಸಾಲ ಮರುಪಾವತಿ ಪ್ರಕರಣ: ಶಿರಸಿಯ ರವೀಶ ಹೆಗಡೆ ಭಟ್ಕಳ ಪೊಲೀಸರ ವಶಕ್ಕೆ

ಭಟ್ಕಳ: ಸಾಲ ಪಡೆದ ಹಣವನ್ನು ಮರುಪಾವತಿಸದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಶಿರಸಿ ಮೂಲದ ರವೀಶ ವೆಂಕಟ್ರಮಣ ಹೆಗಡೆ ಅವರನ್ನು ಭಟ್ಕಳ…

6 hours ago

52ರಲ್ಲೂ ಮಲೈಕಾ ಅರೋರಾ ಲವ್ ಲೈಫ್‌ ಸದ್ದು: ನಬೀಲ್ ನದ್ಲವಿ ಜೊತೆ ಫೋಟೋ ವೈರಲ್, ಹೊಸ ಸಂಬಂಧದ ಗುಸುಗುಸು!

ಮುಂಬೈ: ಬಾಲಿವುಡ್‌ನ ಫಿಟ್ನೆಸ್ ಹಾಗೂ ಫ್ಯಾಷನ್ ಐಕಾನ್ ಮಲೈಕಾ ಅರೋರಾ ತಮ್ಮ ವೈಯಕ್ತಿಕ ಜೀವನದ ವಿಚಾರವಾಗಿಯೂ ಆಗಾಗ್ಗೆ ಸುದ್ದಿಯಾಗುತ್ತಾರೆ. ಇದೀಗ…

7 hours ago

ಬೈಕ್‌ಗೆ ಬೆಂಕಿ ಹಾಕಿದ್ದು ರಾಜಕೀಯ ದ್ವೇಷಕ್ಕಲ್ಲ; ಪತಿಯನ್ನೇ ಕೊಲ್ಲಲು ಪತ್ನಿಯ ಸಂಚು! 6 ಮಂದಿ ಬಂಧನ

ಚಂದ್ರಗಿರಿ (ತಿರುಪತಿ): ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ ಎಂದು ಭಾವಿಸಲಾಗಿದ್ದ ಪ್ರಕರಣವೊಂದು ತನಿಖೆಯ ಬಳಿಕ ಬೇರೆಯದೇ ತಿರುವು…

7 hours ago

ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಪಾಲಿಗೆ ಯಮನಾದ: 6 ದಿನದ ಹಸುಗೂಸಿನೊಂದಿಗೆ ಪರಾರಿ!

ದಾವಣಗೆರೆ: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಸಾವಿಗೆ ಕಾರಣನಾದ ಆರೋಪ ಕೇಳಿಬಂದಿದ್ದು, ಮೃತದೇಹವನ್ನು ಪೊಲೀಸ್ ಠಾಣೆ ಬಳಿಯ ರಸ್ತೆಯಲ್ಲಿ ಬಿಟ್ಟು…

7 hours ago

ಹಾಡಹಗಲೇ ಪಡಿತರ ಅಕ್ಕಿ ಸಾಗಾಟ: ಆಹಾರ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ..!

ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…

1 day ago

₹5 ಸಾವಿರಕ್ಕೆ ರೂಮ್‌ಗೆ ಬಂದ ಯುವತಿ; ಬಿಯರ್‌ನಲ್ಲಿ ಅಮಲು ಬೆರೆಸಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶಾಕ್!

ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…

1 day ago