Latest

ಲೋಕಾಯುಕ್ತ ದಾಳಿ : 20 ಸಾವಿರ ಲಂಚ ಸ್ವೀಕರಿಸೋವಾಗ ಕೋಮಲಾ ಅರೆಸ್ಟ್.

ಕೋಲಾರ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇರುವ ಉಪವಿಭಾಗಾಧಿಕಾರಿ ಕಚೇರಿಯ ಕೇಸ್ ವರ್ಕರ್ ಕೋಮಲಾ ಅವರು ಲಂಚ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಉತ್ತನೂರು ಗ್ರಾಮದ ರೈತ ಸುರೇಶ್ ಅವರ ಪೌತಿ ಖಾತೆಗೆ ಸಂಬಂಧಿಸಿದಂತೆ ಕೋಮಲಾ 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಮೊತ್ತದ ಒಂದು ಭಾಗವಾಗಿ ಮುಂಗಡ 20 ಸಾವಿರ ರೂಪಾಯಿ ಪಡೆಯುವಾಗ, ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ಹಣದ ಸಮೇತ ಬಂಧಿಸಿದರು.

ಕೋಲಾರ ಲೋಕಾಯುಕ್ತ ಇನ್ಸ್‌ಪೆಕ್ಟರ್ ರೇಣುಕಾ ಮತ್ತು ಅವರ ತಂಡ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ್ದು, ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ಘಟನೆ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಕಚೇರಿಯ ಒಳಗುಣಗಳಿಗೆ ಸಂಬಂಧಿಸಿದಂತೆ ಇನ್ನಷ್ಟು ವಿಚಾರಣೆ ನಡೆಸಲಾಗುತ್ತಿದೆ.

nazeer ahamad

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

7 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

22 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago