Latest

ಭೂಮಾಪನ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ: ₹7.5 ಲಕ್ಷ ನಗದು ಮತ್ತು ನಕಲಿ ದಾಖಲೆ ವಶ

ಬೆಂಗಳೂರು: ಭೂಮಾಪನ ಇಲಾಖೆಯ ಸರ್ವೆ ಸೂಪರ್‌ವೈಸರ್ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಜಿ. ಸುರೇಶ್ ಬಾಬು ಅವರ ವಿರುದ್ಧ ಲೋಕಾಯುಕ್ತ ಪೊಲೀಸರ ತಂಡ ಗುರುವಾರ ಏಕಕಾಲದಲ್ಲಿ ಐದು ಕಡೆಗಳಲ್ಲಿ ದಾಳಿ ನಡೆಸಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವುದು ಹಾಗೂ ಜಮೀನಿನ ಪೋಡಿ ಸಂಬಂಧ ನಕಲಿ ದಾಖಲೆಗಳನ್ನು ಸೃಷ್ಟಿಸಿರುವ ಆರೋಪದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.

ದಾಳಿಯ ಪ್ರಮುಖ ಮಾಹಿತಿ:
ನಗದು ಮತ್ತು ನಕಲಿ ದಾಖಲೆಗಳನ್ನು ಪತ್ತೆಹಚ್ಚಿದ ಈ ದಾಳಿಯಲ್ಲಿ, ಲೋಕಾಯುಕ್ತ ಜಿಲ್ಲಾ ಪೊಲೀಸ್ ಅಧೀಕ್ಷಕ ವಿ. ಧನಂಜಯ್ ನೇತೃತ್ವದಲ್ಲಿ ತಂಡ ಕಾರ್ಯಾಚರಣೆ ನಡೆಸಿತು. ಸುರೇಶ್ ಬಾಬು ಅವರ ಬೆಂಗಳೂರು ನಗರದಲ್ಲಿರುವ ಹಾರೋಹಳ್ಳಿ ರಸ್ತೆಯ ಜಯನಗರ 9ನೇ ಕ್ರಾಸ್ ಬಳಿಯ ನಿವಾಸವನ್ನು ಶೋಧಿಸಲಾಗಿದ್ದು, ₹7.50 ಲಕ್ಷ ನಗದು ಮತ್ತು ಹಲವಾರು ಪ್ರಮುಖ ದಾಖಲೆಗಳು ವಶಕ್ಕೆ ಪಡೆಯಲಾಗಿದೆ.

ಹೊಸಕೋಟೆಯ ರಿಂಗ್ ರಸ್ತೆ ಬಳಿ ಇರುವ ಅವರ ಫ್ಯಾಕ್ಟರಿಯ ಅತಿಥಿ ಗೃಹದಲ್ಲಿ ಕೂಡ ಪೊಲೀಸರು ಶೋಧ ನಡೆಸಿ, ಜಮೀನಿನ ಪೋಡಿಗೆ ಸಂಬಂಧಿಸಿದ ನಕಲಿ ದಾಖಲೆಗಳನ್ನು ಪತ್ತೆ ಹಚ್ಚಿದ್ದಾರೆ.

ಭೂಮಾಪನ ಕಚೇರಿ ಸಹ ಶೋಧ
ಭೂಮಾಪನ ಇಲಾಖೆಯ ಕಚೇರಿಯಲ್ಲೂ ಲೋಕಾಯುಕ್ತ ತಂಡದ ದಾಳಿ ನಡೆದಿದೆ. ಅಲ್ಲದೆ, ಪರವಾನಗಿ ಸರ್ವೆಯರ್‌ಗಳಾದ ಸಂದೀಪ್ ಮತ್ತು ಸುನಿಲ್ ಅವರ ಬೆಂಗಳೂರು ನಗರದಲ್ಲಿರುವ ಕೋಟೆ ಬಡಾವಣೆ ಮತ್ತು ಧರ್ಮರಾಯನಗರ ಬಡಾವಣೆಯ ನಿವಾಸಗಳನ್ನೂ ಶೋಧಿಸಲಾಗಿದೆ. ಈ ಸಂದರ್ಭದಲ್ಲಿ ಕೆಲ ಮಹತ್ವದ ದಾಖಲೆಗಳು ದೊರೆತಿವೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಕರಣ ಸಂಬಂಧ ತನಿಖೆ ಮುಂದುವರೆದಿದ್ದು, ಪತ್ತೆಯಾಗಿರುವ ದಾಖಲೆಗಳ ಪರಿಶೀಲನೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago