Categories: CrimeLatest

ಎನ್‌ಎಚ್‌ಎಐ ಅಧಿಕಾರಿ ವಿರುದ್ಧ ಲೋಕಾಯುಕ್ತ ದಾಳಿ: ₹12.95 ಕೋಟಿ ಅಕ್ರಮ ಆಸ್ತಿ ಪತ್ತೆ

ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ (ಎನ್‌ಎಚ್‌ಎಐ) ವಿಶೇಷ ಭೂಸ್ವಾಧೀನಾಧಿಕಾರಿ ಮಲ್ಲಿಕಾರ್ಜುನ ಬಿ. ಅವರಿಗೆ ಸೇರಿದ 11 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಸುಮಾರು ₹12.95 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಹಚ್ಚಿದ್ದಾರೆ.

ಮಲ್ಲಿಕಾರ್ಜುನ ವಿರುದ್ಧ ಬೆಂಗಳೂರು ನಗರ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯ ಭಾಗವಾಗಿ ಬೆಂಗಳೂರಿನ ವಿವಿಧೆಡೆ ಇರುವ ಅವರ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳು ಮತ್ತು ಆಸ್ತಿ ವಿವರಗಳನ್ನು ಪರಿಶೀಲಿಸಿದ್ದಾರೆ.

ದಾಳಿ ವೇಳೆ ಮಲ್ಲಿಕಾರ್ಜುನ ಹಾಗೂ ಅವರ ಕುಟುಂಬ ಸದಸ್ಯರ ಹೆಸರಿನಲ್ಲಿ 100 ಎಕರೆ 5 ಗುಂಟೆ ಕೃಷಿ ಜಮೀನು ಹೊಂದಿರುವುದು ಪತ್ತೆಯಾಗಿದೆ ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.

ಅಧಿಕಾರಿಗಳ ಪ್ರಕಾರ, ಮಲ್ಲಿಕಾರ್ಜುನ ಅವರ ಒಟ್ಟಾರೆ ಆಸ್ತಿಯ ಮೌಲ್ಯ ಸುಮಾರು ₹18.33 ಕೋಟಿ ಎಂದು ಅಂದಾಜಿಸಲಾಗಿದೆ. ಇದರಲ್ಲಿ ಎರಡು ಬಂಗಲೆಗಳು ಹಾಗೂ ಕೃಷಿ ಜಮೀನು ಸೇರಿದಂತೆ ಸುಮಾರು ₹14.28 ಕೋಟಿ ಮೌಲ್ಯದ ಸ್ಥಿರಾಸ್ತಿ ಇದೆ. ಚಿನ್ನಾಭರಣ, ನಗದು, ಕಾರುಗಳು ಹಾಗೂ ಗೃಹೋಪಯೋಗಿ ವಸ್ತುಗಳು ಸೇರಿದಂತೆ ಸುಮಾರು ₹4.40 ಕೋಟಿ ಮೌಲ್ಯದ ಚರಾಸ್ತಿ ಪತ್ತೆಯಾಗಿದೆ.

ಇದಲ್ಲದೆ, ಈವರೆಗೆ ಸುಮಾರು ₹1 ಕೋಟಿ ಮೌಲ್ಯದ ಬ್ಯಾಂಕ್ ಠೇವಣಿಗಳು ಪತ್ತೆಯಾಗಿವೆ. ಮಲ್ಲಿಕಾರ್ಜುನ ಅವರ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳು ಹಾಗೂ ಲಾಕರ್‌ಗಳ ಪರಿಶೀಲನೆ ಇನ್ನೂ ಮುಂದುವರಿದಿದ್ದು, ಹೆಚ್ಚಿನ ಆಸ್ತಿ ಮತ್ತು ಹಣಕಾಸು ವ್ಯವಹಾರಗಳ ಮಾಹಿತಿ ಬಹಿರಂಗವಾಗುವ ಸಾಧ್ಯತೆಯಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮೈಸೂರು ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿ ಕಾರ್ತಿಕ್‌ಗೆ ಮರಣದಂಡನೆ

9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಚಾಕುವಿನಿಂದ 27 ಬಾರಿ ಇರಿದು ಕೊಲೆ ಮಾಡಿದ್ದ ಪ್ರಕರಣ; ₹1 ಲಕ್ಷ…

53 minutes ago

ಕಾರವಾರ–ಇಳಕಲ್ ರಾಜ್ಯ ಹೆದ್ದಾರಿ ದುಸ್ಥಿತಿ: ಹಳೆಕೋಟದಿಂದ ಕಡವಾಡ ಕ್ರಾಸ್‌ವರೆಗೆ ಸಂಚಾರ ದುಸ್ತರ

ಕಾರವಾರ: ಕಾರವಾರ–ಇಳಕಲ್–ಕೈಗಾ ರಾಜ್ಯ ಹೆದ್ದಾರಿಯ ಹಳೆಕೋಟದಿಂದ ಕಡವಾಡ ಕ್ರಾಸ್‌ವರೆಗಿನ ರಸ್ತೆಯ ಒಂದು ಬದಿ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಹಾಗೂ…

54 minutes ago

ಲಿಂಗಸುಗೂರಿನಲ್ಲಿ ಅಬಕಾರಿ ಇಲಾಖೆ ದಾಳಿ: 35.82 ಲೀಟರ್ ಮದ್ಯ ವಶ, ಆರೋಪಿ ಬಂಧನ

ಅಬಕಾರಿ ನಿರೀಕ್ಷಕಿ ಲಕ್ಷ್ಮೀದೇವಿ ನೇತೃತ್ವದಲ್ಲಿ ಕಾರ್ಯಾಚರಣೆ; ಕೃಷ್ಣ ಸ್ಪೆಷಲ್ ಚಿಕನ್ ಮತ್ತು ಮಟನ್ ಖಾನಾವಳಿಯಲ್ಲಿ ಪರಿಶೀಲನೆ ಲಿಂಗಸುಗೂರು: ಕರ್ನಾಟಕ ಈಶಾನ್ಯ…

56 minutes ago

ಥಾರ್–ಬೊಲೆರೋ ನಡುವೆ ಭೀಕರ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಸಹೋದರನ ಪುತ್ರನಿಗೆ ಗಂಭೀರ ಗಾಯ

ಹೊನ್ನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಘಟನೆ; ಬೊಲೆರೋದಲ್ಲಿದ್ದ ಇಬ್ಬರ ಕಾಲು ಮುರಿತ ಲಿಂಗಸುಗೂರು: ತಾಲ್ಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ…

57 minutes ago

ಮೀರತ್ ಬ್ಲೂ ಡ್ರಮ್ ಕೊಲೆ ಪ್ರಕರಣ: ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ

ಮೀರತ್: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಉತ್ತರ ಪ್ರದೇಶದ ಮೀರತ್‌ನ ಬ್ಲೂ ಡ್ರಮ್ ಕೊಲೆ ಪ್ರಕರಣದಲ್ಲಿ ಪತ್ನಿ ಮುಸ್ಕಾನ್ ರಸ್ತೋಗಿ…

1 week ago

ಚಿಕ್ಕೋಡಿಯಲ್ಲಿ ಉಪಲೋಕಾಯುಕ್ತರ ದಿಢೀರ್ ತಪಾಸಣೆ: ಸರ್ಕಾರಿ ಕಚೇರಿಗಳ ಲೋಪದೋಷಗಳ ವಿರುದ್ಧ 27 ಸ್ವಯಂಪ್ರೇರಿತ ಪ್ರಕರಣ ದಾಖಲು

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ವಿವಿಧ ಸರ್ಕಾರಿ ಕಚೇರಿಗಳಿಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಸೆಪ್ಟೆಂಬರ್ 24…

2 weeks ago