ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ ಮೇಲೆ ಇಂದು ಬೆಳಗ್ಗೆ ದಾಳಿ ನಡೆದಿದೆ. ವಸಂತ ರವರ ಸಹೋದರನಾದ ಭೀಮಸಿಂಗ್ ನಾಯಕ್ ಅವರ ಬಾಗಲಕೋಟೆಯ ಮನೆಯ ಮೇಲೆಯೂ ಸಹ ದಾಳಿ ನಡೆದಿದೆ. ಭೀಮಸಿಂಗ್ ನಾಯಕ ಬಾಗಲಕೋಟೆ ಡಿಎಆರ್‌ನಲ್ಲಿ ಎಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಾಗಲಕೋಟೆಯ ಪೋಸ್ಟಲ್ ಕಾಲೋನಿಯಲ್ಲಿರುವ ಭೀಮಸಿಂಗ್ ಮನೆ ಮೇಲೆ ದಾಳಿ ನಡದಿದೆ. ಹಾಗೆಯೇ ವಸಂತ ನಾಯಕ ಅವರ ಮೂಲ ಗ್ರಾಮ ಬಾಗಲಕೋಟೆ ತಾಲೂಕಿನ ಬಸವನಗರ ತಾಂಡಾದಲ್ಲಿರುವ ಮನೆಯ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೀಗ ತಾನೇ ಅಧಿಕಾರ ವಹಿಸಿಕೊಂಡ ಬಾಗಲಕೋಟೆ ಲೋಕಾಯುಕ್ತ ಎಸ್.ಪಿ ಮಹಾನಿಂಗ್ ನಂದಗಾವಿ ಮಾರ್ಗದರ್ಶನದಲ್ಲಿ ಲೋಕಾಯುಕ್ತ, ಡಿವೈಎಸ್ ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ದಾಳಿ ನಡೆದಿದೆ. ಈ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ವಿಶ್ವನಾಥ ಭಜಂತ್ರಿ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…