ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಇಬ್ಬರು ಸಹಾಯಕ ಎಂಜಿನಿಯರ್‌ಗಳು ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ. ಹೆಬ್ಬಾಳ ಉಪ ವಿಭಾಗದ ಎಇಇ ಮಹದೇವ ಮತ್ತು ಆರ್‌ಎಂವಿ ಉಪ ವಿಭಾಗದ ಎಇ ಸುರೇಂದ್ರ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದು, ಜಮೆನಾದ ಹಣವನ್ನು ಜಪ್ತಿ ಮಾಡಿದ್ದಾರೆ.
ಎನ್‌ಒಸಿ (ನೋ ಅಭ್ಜೆಕ್ಷನ್ ಸರ್ಟಿಫಿಕೆಟ್) ನೀಡಲು 10 ಲಕ್ಷ ರೂಪಾಯಿಗಳ ಲಂಚವನ್ನು ಬೇಡಿಕೆಯಿಟ್ಟಿದ್ದ ಇಂಜಿನಿಯರ್‌ಗಳು, ದೂರುದಾರ ಸಂಜಯ್ ಎಂಬುವವರಿಂದ ಮುಂಗಡವಾಗಿ 5 ಲಕ್ಷ ರೂ.ಗಳನ್ನು ಪಡೆಯುವ ಸಂದರ್ಭದಲ್ಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆರೋಪಿತರನ್ನು ಸ್ಥಳದಲ್ಲೇ ವಶಕ್ಕೆ ಪಡೆದ ಅಧಿಕಾರಿಗಳು, ಹಣವನ್ನು ಸಾಕ್ಷ್ಯವಾಗಿ ಜಪ್ತಿ ಮಾಡಿದ್ದಾರೆ. ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಬಿಬಿಎಂಪಿಯಲ್ಲಿನ ಅಧಿಕಾರಿಗಳಿಂದ ಲಂಚ ಬೇಡಿಕೆ ಆರೋಪಗಳು ಮುಂದುವರಿದಿರುವಂತೆ ಈ ಪ್ರಕರಣ ಮತ್ತೊಮ್ಮೆ ರಾಜ್ಯದ ಆಡಳಿತ ವ್ಯವಸ್ಥೆಯ ಭದ್ರತೆ ಬಗ್ಗೆ ಪ್ರಶ್ನೆ ಎಬ್ಬಿಸಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…