Latest

ಎನ್‌ಒಸಿ ಗೆ 10 ಲಕ್ಷ ಲಂಚ ಬೇಡಿಕೆ: ಬಿಬಿಎಂಪಿ ಇಂಜಿನಿಯರ್‌ಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಇಬ್ಬರು ಸಹಾಯಕ ಎಂಜಿನಿಯರ್‌ಗಳು ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ. ಹೆಬ್ಬಾಳ ಉಪ ವಿಭಾಗದ ಎಇಇ ಮಹದೇವ ಮತ್ತು ಆರ್‌ಎಂವಿ ಉಪ ವಿಭಾಗದ ಎಇ ಸುರೇಂದ್ರ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದು, ಜಮೆನಾದ ಹಣವನ್ನು ಜಪ್ತಿ ಮಾಡಿದ್ದಾರೆ.

ಎನ್‌ಒಸಿ (ನೋ ಅಭ್ಜೆಕ್ಷನ್ ಸರ್ಟಿಫಿಕೆಟ್) ನೀಡಲು 10 ಲಕ್ಷ ರೂಪಾಯಿಗಳ ಲಂಚವನ್ನು ಬೇಡಿಕೆಯಿಟ್ಟಿದ್ದ ಇಂಜಿನಿಯರ್‌ಗಳು, ದೂರುದಾರ ಸಂಜಯ್ ಎಂಬುವವರಿಂದ ಮುಂಗಡವಾಗಿ 5 ಲಕ್ಷ ರೂ.ಗಳನ್ನು ಪಡೆಯುವ ಸಂದರ್ಭದಲ್ಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆರೋಪಿತರನ್ನು ಸ್ಥಳದಲ್ಲೇ ವಶಕ್ಕೆ ಪಡೆದ ಅಧಿಕಾರಿಗಳು, ಹಣವನ್ನು ಸಾಕ್ಷ್ಯವಾಗಿ ಜಪ್ತಿ ಮಾಡಿದ್ದಾರೆ. ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡಿರುವ ಲೋಕಾಯುಕ್ತ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಬಿಬಿಎಂಪಿಯಲ್ಲಿನ ಅಧಿಕಾರಿಗಳಿಂದ ಲಂಚ ಬೇಡಿಕೆ ಆರೋಪಗಳು ಮುಂದುವರಿದಿರುವಂತೆ ಈ ಪ್ರಕರಣ ಮತ್ತೊಮ್ಮೆ ರಾಜ್ಯದ ಆಡಳಿತ ವ್ಯವಸ್ಥೆಯ ಭದ್ರತೆ ಬಗ್ಗೆ ಪ್ರಶ್ನೆ ಎಬ್ಬಿಸಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

14 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago