ಗದಗ: ರಾಜ್ಯದ ಲೋಕಾಯುಕ್ತ ಠಾಣೆ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಗದಗದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಅವರ ನಿವಾಸದ ಮೇಲೆ ಅಕ್ರಮ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಭಾರಿ ಮಟ್ಟದ ದಾಳಿ ನಡೆಸಿದ್ದಾರೆ.
ಎಸ್‌ಪಿ ಹನುಮಂತರಾಯ ಅವರ ನೇತೃತ್ವದಲ್ಲಿ ನಡೆದ ಈ ವಿಶೇಷ ಕಾರ್ಯಾಚರಣೆಯಲ್ಲಿ ಗದಗ, ಹಡಗಲಿ ಮತ್ತು ಹಾವೇರಿ ಸೇರಿದಂತೆ ಗಂಗಾಧರ ಶಿರೋಳ ಅವರ ಸ್ವಾಮ್ಯದ ಆರು ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಅವರ ನಿವಾಸಗಳು ಹಾಗೂ ಕಛೇರಿಗಳನ್ನು ಸಮಗ್ರವಾಗಿ ಪರಿಶೀಲಿಸಲಾಗಿದೆ.
ದಾಳಿಯ ವೇಳೆ ಅಧಿಕಾರಿಗಳು ಬಹಳಷ್ಟು ಪ್ರಮಾಣದ ಚಿನ್ನಾಭರಣ, ಬೆಳ್ಳಿ ಸಾಮಗ್ರಿಗಳು, ಹೂಡಿಕೆ ದಾಖಲೆಗಳು ಹಾಗೂ ಹಲವು ಮಾದರಿಯ ವಾಹನಗಳನ್ನು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ. ಜತೆಗೆ, ಅವರ ಆಸ್ತಿ ಗಳಿಕೆ ಕುರಿತು ಹೆಚ್ಚಿನ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.
ಲೋಕಾಯುಕ್ತದ ಈ ಕ್ರಮದಿಂದಾಗಿ ಗದಗ ಜಿಲ್ಲೆಯಲ್ಲಿ ಚರ್ಚೆಗೆ ಕಾರಣವಾಗಿದ್ದು, ಅಧಿಕಾರಿಗಳಿಂದ ಅಧಿಕೃತ ಮಾಹಿತಿಗಾಗಿ ಇನ್ನಷ್ಟೇ ನಿರೀಕ್ಷೆ ನಡೆಯುತ್ತಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…