Categories: CorruptionLatest

ಇ-ಸ್ವತ್ತು ಅಕ್ರಮ ಆರೋಪ: ಹುಬ್ಬಳ್ಳಿ-ಧಾರವಾಡ ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಹುಬ್ಬಳ್ಳಿ: ಇ-ಸ್ವತ್ತು ಮತ್ತು ಭೂ ದಾಖಲೆ ವರ್ಗಾವಣೆ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ಹಾಗೂ ಅನಗತ್ಯ ವಿಳಂಬ ನಡೆಯುತ್ತಿದೆ ಎಂಬ ಸಾರ್ವಜನಿಕರ ದೂರುಗಳ ಹಿನ್ನೆಲೆ, ಲೋಕಾಯುಕ್ತ ಅಧಿಕಾರಿಗಳು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿವಿಧ ವಲಯ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.

ಶುಕ್ರವಾರ ಬೆಳಗ್ಗೆ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಎಸ್.ಟಿ. ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ 12 ವಲಯ ಕಚೇರಿಗಳ ಮೇಲೂ ಏಕಕಾಲದಲ್ಲಿ ಪರಿಶೀಲನೆ ನಡೆಯಿತು. ಇದಕ್ಕಾಗಿ ಪ್ರತ್ಯೇಕ 12 ತಂಡಗಳನ್ನು ರಚಿಸಿ ದಾಖಲೆಗಳ ತಪಾಸಣೆ ನಡೆಸಲಾಗುತ್ತಿದೆ.

ಇ-ಸ್ವತ್ತುಗಾಗಿ ಲಂಚ ಆರೋಪ

ಇ-ಸ್ವತ್ತು ದಾಖಲೆಗಳನ್ನು ಮಾಡಿಕೊಡುವಲ್ಲಿ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪಗಳು ಸಾಕಷ್ಟು ದಿನಗಳಿಂದ ಕೇಳಿಬರುತ್ತಿದ್ದವು. “ಹಣ ಕೊಟ್ಟರೆ ಮಾತ್ರ ಕೆಲಸ ಆಗುತ್ತದೆ, ಇಲ್ಲವಾದರೆ ಕಡತಗಳನ್ನು ತಿಂಗಳುಗಳ ಕಾಲ ಬಾಕಿ ಇಡಲಾಗುತ್ತಿದೆ” ಎಂದು ಸಾರ್ವಜನಿಕರು ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಚೇರಿಗಳಲ್ಲಿನ ದಾಖಲೆಗಳು, ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಹಾಗೂ ಇ-ಸ್ವತ್ತು ವರ್ಗಾವಣೆಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ದಾಖಲೆಗಳ ಸ್ಕ್ಯಾನ್, ಸಿಬ್ಬಂದಿ ವಿಚಾರಣೆ

ಕಾರ್ಯಾಚರಣೆ ವೇಳೆ ಹಲವು ಮಹತ್ವದ ಕಡತಗಳು ಹಾಗೂ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಕೆಲ ಸಿಬ್ಬಂದಿಯಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ದೂರುಗಳಿಗೆ ಸಂಬಂಧಿಸಿದ ದಾಖಲೆಗಳ ಸತ್ಯಾಸತ್ಯತೆ ಪರಿಶೀಲನೆ ಮುಂದುವರಿದಿದೆ.

ಲೋಕಾಯುಕ್ತ ದಾಳಿಯಿಂದ ಪಾಲಿಕೆ ಕಚೇರಿಗಳಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸಾರ್ವಜನಿಕರ ಗಮನ ಸೆಳೆದಿದೆ.

ಭ್ರಷ್ಟರ ಬೇಟೆ

Recent Posts

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

17 minutes ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

8 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

23 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago