Latest

ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣ – ಕಾರ್ಕಳ ಮೆಸ್ಕಾಂ ಅಧಿಕಾರಿಯ ಮನೆ ಮೇಲೆ ಲೋಕಾಯುಕ್ತ ದಾಳಿ

ಉಡುಪಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಶಂಕೆಯ ಹಿನ್ನೆಲೆ, ಕಾರ್ಕಳ ಮೆಸ್ಕಾಂ ಅಕೌಂಟ್ಸ್ ಅಧಿಕಾರಿ ಗಿರೀಶ್ ರಾವ್ ವಿರುದ್ಧ ಲೋಕಾಯುಕ್ತ ಪೊಲೀಸರು ಶನಿವಾರ ಬೆಳಗ್ಗೆಯಿಂದ ಸುದೀರ್ಘ ದಾಳಿ ನಡೆಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಪುಲ್ಕೇರಿಯಲ್ಲಿ ಇರುವ ಗಿರೀಶ್ ರಾವ್ ಅವರ ನಿವಾಸ, ವಾಣಿಜ್ಯ ಸಂಕೀರ್ಣ ಹಾಗೂ ಇತರ ಮೂರು ಸ್ಥಳಗಳ ಮೇಲೆ ದಾಳಿ ನಡೆಯಿತು. ಈ ತನಿಖೆಯನ್ನು ಲೋಕಾಯುಕ್ತ ಡಿವೈಎಸ್‌ಪಿ ಮಂಜುನಾಥ್ ಅವರ ನೇತೃತ್ವದಲ್ಲಿ ವಿವಿಧ ಅಧಿಕಾರಿಗಳ ತಂಡ ನಡೆಸಿತ್ತು.

ಮೂಲಗಳ ಪ್ರಕಾರ, ಗಿರೀಶ್ ರಾವ್ ಅವರ ಹೊಂದಿರುವ ಆಸ್ತಿ, ಆಯವ್ಯಯಕ್ಕೆ ತಕ್ಕಷ್ಟು ಅಡಾಲು ದಾಖಲೆ ನೀಡದಿರುವ ಕಾರಣದಿಂದಾಗಿ ಈ ದಾಳಿಯ ಅವಶ್ಯಕತೆ ಉಂಟಾಯಿತು ಎಂದು ಹೇಳಲಾಗಿದೆ. ದಾಳಿಯ ವೇಳೆ ದಾಖಲೆಗಳು, ಆಸ್ತಿ ವಿವರಗಳು ಹಾಗೂ ಬ್ಯಾಂಕ್ ಲೆಕ್ಕಪತ್ರಗಳ ಪರಿಶೀಲನೆ ನಡೆದಿದ್ದು, ಮೌಲ್ಯಮಾಪನ ಪ್ರಕ್ರಿಯೆ ಮುಂದುವರಿದಿದೆ.

ಈ ಕುರಿತು ಹೆಚ್ಚಿನ ಮಾಹಿತಿ ಮುಂದಿನ ತನಿಖೆ ನಂತರ ಬಹಿರಂಗವಾಗುವ ಸಾಧ್ಯತೆ ಇದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಲೋಕಾಯುಕ್ತ ಇಲಾಖೆ ಸ್ಪಷ್ಟಪಡಿಸಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

12 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago