Categories: CrimeLatest

ಮಂಡ್ಯದಲ್ಲಿ ಲೋಕಾಯುಕ್ತ ದಾಳಿ: ಅಪ್ರಾಪ್ತ ಗರ್ಭಿಣಿಯರಿಗೆ ಸ್ಕ್ಯಾನಿಂಗ್‌ – ಖಾಸಗಿ ಸೆಂಟರ್‌ಗಳ ನಿಯಮ ಉಲ್ಲಂಘನೆ ಬಯಲು

ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ಭಾಗದಲ್ಲಿನ ಖಾಸಗಿ ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ ಗಂಭೀರ ನಿಯಮ ಉಲ್ಲಂಘನೆಗಳು ನಡೆದಿರುವುದು ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಗರ್ಭಿಣಿಯರಿಗೆ ಸ್ಕ್ಯಾನಿಂಗ್‌ ನಡೆಸಿರುವುದು ಸೇರಿದಂತೆ ಹಲವು ಅಕ್ರಮಗಳು ಪತ್ತೆಯಾಗಿವೆ.

ಕಳೆದ ಎರಡು ದಿನಗಳಿಂದ ಲೋಕಾಯುಕ್ತ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲೂಕು ಆಸ್ಪತ್ರೆಗಳು ಹಾಗೂ ಖಾಸಗಿ ಸ್ಕ್ಯಾನಿಂಗ್‌ ಕೇಂದ್ರಗಳ ಮೇಲೆ ಗೌಪ್ಯ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಈ ವೇಳೆ ಹಲವು ಅಕ್ರಮಗಳು ಮತ್ತು ನಿರ್ಲಕ್ಷ್ಯಗಳು ಬಹಿರಂಗಗೊಂಡಿದ್ದು, ವಿವರವಾದ ವರದಿ ಸಿದ್ಧಪಡಿಸಲಾಗಿದೆ.

ಪಿಸಿ & ಪಿಎನ್‌ಡಿಟಿ ಕಾಯಿದೆ ಪ್ರಕಾರ, ಜಿಲ್ಲೆಯ ಸ್ಕ್ಯಾನಿಂಗ್‌ ಸೆಂಟರ್‌ಗಳನ್ನು ಪ್ರತಿ 90 ದಿನಕ್ಕೊಮ್ಮೆ ಪರಿಶೀಲಿಸಬೇಕು. ಆದರೆ, ಈ ಕುರಿತು ಡಿಎಚ್‌ಒ ಕಚೇರಿಯಲ್ಲಿ ಯಾವುದೇ ದಾಖಲೆಗಳನ್ನು ನಿರ್ವಹಿಸದಿರುವುದು ಪತ್ತೆಯಾಗಿದೆ. ಅಲ್ಲದೆ, ಮಂಡ್ಯ ಮತ್ತು ಪಾಂಡವಪುರ ಉಪವಿಭಾಗಾಧಿಕಾರಿಗಳು ನಿಯಮಿತವಾಗಿ ಪರಿಶೀಲನೆ ನಡೆಸಬೇಕಿದ್ದರೂ, ಅದು ನಡೆದಿಲ್ಲ ಎಂಬುದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಪರಿಶೀಲನೆ ವೇಳೆ 7 ಅಪ್ರಾಪ್ತ ಗರ್ಭಿಣಿಯರಿಗೆ ನಿಯಮ ಉಲ್ಲಂಘಿಸಿ ಸ್ಕ್ಯಾನಿಂಗ್‌ ಮಾಡಿರುವುದು ದೃಢಪಟ್ಟಿದೆ. ಜೊತೆಗೆ, 18ರಿಂದ 20 ವರ್ಷದೊಳಗಿನ ಮಹಿಳೆಯರಿಗೆ ವಯಸ್ಸಿನ ದೃಢೀಕರಣ ದಾಖಲೆ ಪಡೆಯದೇ 64 ಗರ್ಭಿಣಿಯರಿಗೆ ಸ್ಕ್ಯಾನಿಂಗ್‌ ಮಾಡಲಾಗಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಂದಿದೆ.

ಇದಲ್ಲದೆ, ಖಾಸಗಿ ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ ಸ್ಕ್ಯಾನಿಂಗ್‌ ವರದಿಗಳನ್ನು ಸರಿಯಾಗಿ ಸಂಗ್ರಹಿಸದೇ ಇರುವುದಲ್ಲದೆ, ದಾಖಲಾದ ಮಾಹಿತಿ ಮತ್ತು ವಾಸ್ತವಿಕ ವರದಿಗಳ ನಡುವೆ ವ್ಯತ್ಯಾಸ ಕಂಡುಬಂದಿದೆ.

ಮತ್ತೊಂದೆಡೆ, ಸರಕಾರಿ ಆಸ್ಪತ್ರೆಗಳ ಸ್ತ್ರೀರೋಗ ತಜ್ಞರು ಗರ್ಭಿಣಿಯರನ್ನು ಉನ್ನತ ದರ್ಜೆಯ ಸರಕಾರಿ ಆಸ್ಪತ್ರೆಗಳಿಗೆ ಶಿಫಾರಸು ಮಾಡುವ ಬದಲು ಖಾಸಗಿ ಸ್ಕ್ಯಾನಿಂಗ್‌ ಸೆಂಟರ್‌ಗಳಿಗೆ ರೆಫರ್‌ ಮಾಡಿರುವುದು ಕೂಡ ಬೆಳಕಿಗೆ ಬಂದಿದೆ. ಇದರಿಂದ ಖಾಸಗಿ ಸಂಸ್ಥೆಗಳಿಗೆ ಲಾಭ ಮಾಡಿಕೊಡುವ ಪ್ರಯತ್ನ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಒಟ್ಟಾರೆ, ಆರೋಗ್ಯ ಇಲಾಖೆಯಲ್ಲಿ ಗಂಭೀರ ನಿರ್ಲಕ್ಷ್ಯ ಮತ್ತು ನಿಯಮ ಉಲ್ಲಂಘನೆ ನಡೆದಿರುವುದು ಈ ದಾಳಿಯಿಂದ ಬಹಿರಂಗವಾಗಿದ್ದು, ಮುಂದಿನ ಕ್ರಮಗಳತ್ತ ಎಲ್ಲರ ಗಮನ ಸೆಳೆಯಲಾಗಿದೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

17 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

21 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago